Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.12: ಪ್ರಾಚಾರ್ಯರ ಡೈರಿ ಬಿಡುಗಡೆ,...

ಡಿ.12: ಪ್ರಾಚಾರ್ಯರ ಡೈರಿ ಬಿಡುಗಡೆ, ಶೈಕ್ಷಣಿಕ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ9 Dec 2017 7:34 PM IST
share

ಪುತ್ತೂರು, ಡಿ. 9: ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ತಯಾರಿಸಲಾದ ಪ್ರಾಚಾರ್ಯರ ಡೈರಿ ಬಿಡುಗಡೆ ಮತ್ತು ಶೈಕ್ಷಣಿಕ ಕಾರ್ಯಾಗಾರ ಡಿ.12ರಂದು ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಎಲ್ವೀರಾ ಫಿಲೋಮಿನಾ ತಿಳಿಸಿದ್ದಾರೆ.

ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಡೈರಿ ಬಿಡುಗಡೆಗೊಳಿಸಲಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಕೆ.ಆರ್. ತಿಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಮಾದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಫಾ ಆಲ್ಫ್ರೆಡ್ ಜೆ.ಪಿಂಟೊ, ಸಂಚಾಲಕರು ಆಶೀರ್ವಚನ ನೀಡಲಿದ್ದಾರೆ. ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ಡಾ ಆ್ಯಂಟನಿ ಪ್ರಕಾಶ್ ಮೊಂತೇರೊ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಂತಾರಾಷ್ಟ್ರೀಯ ಸೃಜನಶೀಲ ಕಲಿಕಾ ತರಬೇತಿ ಕೇಂದ್ರ, ಬೆಂಗಳೂರು ಇದರ ಸ್ಥಾಪಕರು ಮತ್ತು ಅಧ್ಯಕ್ಷರೂ ಆದ ಡಾ ಗುರುರಾಜ ಕರ್ಜಗಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಾರ್ಯಾಗಾರ ನಡೆಯಲಿದೆ. ಮಧ್ಯಾಹ್ನದ ನಂತರ ಎರಡನೇ ಹಂತದ ಕಾರ್ಯಾಗಾರ ನಡೆಯಲಿದೆ ಎಂದರು.

ಜಿಲ್ಲೆಯ 202 ಕಾಲೇಜುಗಳ ಬಗ್ಗೆ ಸಮಗ್ರ ಮಾಹಿತಿ ನೀಡುವ ಮತ್ತು ಸರಕಾರದ ಸುತ್ತೋಲೆ, ಇನ್ನಿತರ ನಿಯಮಗಳ ಬಗ್ಗೆ ಡೈರಿಯಲ್ಲಿ ಮಾಹಿತಿಗಳಿವೆ. ದಕ್ಷಿಣ ಕನ್ನಡ ಜಿಲ್ಲಾ ಪದವಿಪೂರ್ವ ಕಾಲೇಜು ಪ್ರಾಚಾರ್ಯರ ಸಂಘವು ಮಂಗಳೂರು ಜಿಲ್ಲಾ ಕೇಂದ್ರದಲ್ಲಿ ನಾನಾ ಕಾರ್ಯಕ್ರಮ ನಡೆಸಿದ್ದು, ಬಳಿಕ ಜಿಲ್ಲೆಯ ಎಲ್ಲ ತಾಲೂಕುಗಳಲ್ಲೂ ಚಟುವಟಿಕೆ ನಡೆಸುತ್ತಿದೆ. ಪುತ್ತೂರು ಫೀಲೋಮಿನಾ ಕಾಲೇಜು ತನ್ನ ವಜ್ರ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಈ ಬಾರಿ ಇಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಯಿತು ಎಂದು ಅವರು ತಿಳಿಸಿದರು.

ಜಿಲ್ಲೆಯ 202 ಕಾಲೇಜುಗಳ ಪ್ರಾಚಾರ್ಯರು ಸಂಘದ ಸದಸ್ಯರಾಗಿದ್ದಾರೆ. ರ್ಯಾಂಕ್ ವಿದ್ಯಾರ್ಥಿಗಳನ್ನು ಗೌರವಿಸುವ ಹಾಗೂ ಅತೀ ಹೆಚ್ಚು ಫಲಿತಾಂಶತಂದು ಕೊಟ್ಟ ಕಾಲೇಜುಗಳನ್ನು ಅಭಿನಂದಿಸುವ ಕಾರ್ಯಕ್ರಮ ಪ್ರತಿ ವರ್ಷವೂ ಹಮ್ಮಿಕೊಳ್ಳುತ್ತಿದೆ. ಇಲಾಖೆಯಿಂದ ಬರುವ ಸುತ್ತೋಲೆಗಳನ್ನು ಕಾಲೇಜುಗಳಿಗೆ ತಲುಪಿಸುವ ಉದ್ದೇಶದಿಂದ ಆಯಾಯ ಕಾಲೇಜುಗಳ ಪ್ರಾಚಾರ್ಯರ ಸಭೆಯನ್ನು ಕರೆದು ಶೈಕ್ಷಣಿಕ ಚಟುವಟಿಕೆಗಳು ಸುಸೂತ್ರವಾಗಿ ನೆರವೇರುವಂತೆ ಮಾಡುತ್ತಿದೆ. ನಿವೃತ್ತಿ ಹೊಂದಿದ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳನ್ನು ಸನ್ಮಾನಿಸುವ ಜವಾಬ್ದಾರಿ, ವಾರ್ಷಿಕ ಪರೀಕ್ಷೆ ಹೊರತುಪಡಿಸಿ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಇತರ ಪರೀಕ್ಷೆಗಳಿಗೆ ಪ್ರಶ್ನಾ ಪತ್ರಿಕೆಗಳನ್ನು ಸರಬರಾಜು ಮಾಡುವ ಕರ್ತವ್ಯ ಮತ್ತು ವಿಷಯವಾರು ಸಂಘಗಳು ನಡೆಸುವ ಕಾರ್ಯಕ್ರಮಕ್ಕೆ ಧನ- ಸಹಾಯವನ್ನು ಕೂಡ ಈ ಸಂಘ ಮಾಡುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಾಚಾರ್ಯರ ಸಂಘದ ಕಾರ್ಯದರ್ಶಿ ಡಾಕಿಶೋರ್ ಕುಮಾರ್ ಶೇಣಿ, ಉಪಾಧ್ಯಕ್ಷ ಎನ್.ದುಗ್ಗಪ್ಪ, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಫಾ ವಿಜಯ್ ಲೋಬೊ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X