ರಸ್ತೆ ಅಪಘಾತ : ಇಬ್ಬರು ಮೃತ್ಯು

ನಾಗಮಂಗಲ,ಡಿ.9: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿಹೊಡೆದು ಎದುರಿಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಬಡಿದು ಸ್ಥಳದಲ್ಲೆ ಇಬ್ಬರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬೀಚನಹಳ್ಳಿ ಗೇಟ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ.
ಬೆಂಗಳೂರಿನ ಪ್ರದೀಪ(23) ಹಾಗು ದಿವ್ಯ(30) ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಶಿವಾನಂದ ಶೆಟ್ಟಿ, ಚೈತ್ರ, ಮೋಹನ್‍ಕುಮಾರ್ ಮತ್ತು ಮೃತರಾದ ದಿವ್ಯ, ಪ್ರದೀಪ ಅವರು ಬೆಂಗಳೂರಿನಿಂದ ಹಾಸನ ಜಿಲ್ಲೆ ಬೇಲೂರಿಗೆ ಕಾರಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಬೀಚನಹಳ್ಳಿ ಬಳಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಢಿಕ್ಕಿಯೊಡೆದು ಮತ್ತೊಂದು ಬದಿಯ ರಸ್ತೆಯಲ್ಲಿ ಹಾಸನಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಸತ್ಯನಾರಾಯಣ ಮತ್ತು ಸರೋಜಮ್ಮ ಅವರಿದ್ದ ಕಾರಿಗೆ ಬಡಿದಿದೆ.
ಅಪಘಾತದ ರಭಸಕ್ಕೆ ಎರಡೂ ಕಾರುಗಳು ನಜ್ಜುಗುಜ್ಜಾಗಿದ್ದು, ಗಾಯಗೊಂಡವರೆಲ್ಲರನ್ನೂ ತಕ್ಷಣ ಸ್ಥಳೀಯ ಬಿಜಿನಗರದ ಆದಿಚುಂಚನಗಿರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸ್ಥಳಕ್ಕೆ ಡಿವೈಎಸ್‍ಪಿ ಧರ್ಮೇಂದರ್, ಸಿಪಿಐ ಧನರಾಜ್, ಪಿಎಸ್‍ಐ ಶರತ್‍ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಬೆಳ್ಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.







