ಕರ್ಜೆಯಲ್ಲಿ ಗಿರಿಜನ ಉತ್ಸವ ಉದ್ಘಾಟನೆ

ಬ್ರಹ್ಮಾವರ, ಡಿ.10: ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ಜೆ ತುಳಜಾ ಭವಾನಿ ಮರಾಠಿ ಸಮುದಾಯ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘದ ಜಂಟಿ ಆಶ್ರಯದಲ್ಲಿ ಗಿರಿಜನ ಉತ್ಸವವನ್ನು ರವಿವಾರ ಕರ್ಜೆ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ ಮಾತನಾಡಿ, ಶ್ರಮಜೀವಿಗಳಾಗಿರುವ ಗಿರಿಜನರು ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಪಾರ. ಕೌಶಲ್ಯಾಧಾರಿತ ವೃತ್ತಿಗಳಲ್ಲಿ ಶ್ರಮವಹಿಸಿ ದುಡಿಯುವ ಅವರು ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ ಎಂದು ಅಭಿ ಪ್ರಾಯ ಪಟ್ಟರು.
ಉಡುಪಿ ತಾಪಂ ಸದಸ್ಯೆ ಗೋಪಿ ಕೆ. ನಾಯ್ಕ, ಮಾಜಿ ಸದಸ್ಯ ಉಮೇಶ್ ನಾಯ್ಕ, ಕರ್ಜೆ ಗ್ರಾಪಂ ಅಧ್ಯಕ್ಷೆ ನಾಗರತ್ನ, ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಅನಂತ ನಾಯ್ಕ, ಶಾಲೆಯ ಮುಖ್ಯ ಶಿಕ್ಷಕಿ ಆಶಾಲತಾ, ತುಳಜಾ ಭವಾನಿ ಸಂಘದ ಅಧ್ಯಕ್ಷ ಬಿ.ನಾರಾಯಣ ನಾಯ್ಕ, ಗೌರವಾಧ್ಯಕ್ಷ ಲಚ್ಚು ನಾಯ್ಕ, ಮರಾಠಿ ಯುವ ಸಂಘಟನೆಯ ಅಧ್ಯಕ್ಷ ಅಪ್ಪು ನಾಯ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಮುದಾಯದ ಸಾಧಕರು ಮತ್ತು ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸ ಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದೇವದಾಸ್ ಪೈ ಸ್ವಾಗತಿಸಿದರು. ಕೃಷ್ಣ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಲಚ್ಚು ನಾಯ್ಕ ವಂದಿಸಿದರು. ಶಿಕ್ಷಕ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ತಂಡಗಳಿಂದ ಜಾನಪದ ಸಾಂಸ್ಕೃತಿಕ ಕಾರ್ಯ ಕ್ರಮಗಳು ಜರಗಿದವು.







