ವಿಷ್ಣು ಸಹಸ್ರನಾಮ ಪಾರಾಯಣ

ಉಡುಪಿ, ಡಿ.10: ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಹಾಗೂ ಇತರ ಬ್ರಾಹ್ಮಣ ಸಂಘಗಳ ಸಹಭಾಗಿತ್ವದಲ್ಲಿ ಉದಯಾಸ್ತಮಾನ ಶ್ರೀವಿಷ್ಣು ಸಹಸ್ರ ನಾಮ ಪಾರಾಯಣ ರವಿವಾರ ಶ್ರೀಕೃಷ್ಣ ಮಠದ ಚಂದ್ರಶಾಲೆಯಲ್ಲಿ ಜರಗಿತು.
ಕಾರ್ಯಕ್ರಮವನ್ನು ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಹಾಸಭಾದ ಜಿಲ್ಲಾ ಅಧ್ಯಕ್ಷ ಮಂಜುನಾಥ ಉಪಾಧ್ಯ, ಕಾರ್ಯದರ್ಶಿ ಕೆ.ವೆಂಕಟರಮಣ ಭಟ್, ಸಂಘಟನಾ ಕಾರ್ಯದರ್ಶಿ ಕೆ.ನಾಗರಾಜ ಉಪಾಧ್ಯಾಯ ಮೊದಲಾದವರು ಉಪಸ್ಥಿತರಿದ್ದರು.
Next Story





