ಸಂಘ ಪರಿವಾರದ ಕಾರ್ಯಕರ್ತರ ಕೊಲೆ: ಎನ್‌ಐಎಗೆ ವಹಿಸಲು ಅಗ್ರಹಿಸಿ ಡಿ.12ಕ್ಕೆ ರಾಜ್ಯಪಾಲರಿಗೆ ದೂರು
ಬೆಂಗಳೂರು, ಡಿ.10: ಹೊನ್ನಾವರ ಪರೇಶ್ ಮೇಸ್ತಾ ಸಾವು ಪ್ರಕರಣ ಸೇರಿ ಇತ್ತೀಚೆಗೆ ಹತ್ಯೆಗೀಡಾದ 19 ಮಂದಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರ ಹತ್ಯೆಯ ತನಿಖೆಯನ್ನು ಎನ್‌ಐಎಗೆ ವಹಿಸಲು ಡಿ.12ರಂದು ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಮಾಡಲಾಗುವುದು ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ರವಿವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.12ರಂದು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಶಾಸಕರ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯಪಾಲರನ್ನು ಭೇಟಿಯಾಗಿ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಹತ್ಯೆಯ ತನಿಖೆಯನ್ನು ಎನ್‌ಐಎಗೆ ವಹಿಸಲು ಮನವಿ ಮಾಡಲಾಗುವುದು ಎಂದು ಹೇಳಿದರು.
ಡಿ.18ರಂದು ಹೊನ್ನಾವರದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಈ ಪ್ರತಿಭಟನೆಯ ನೇತೃತ್ವವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಮೇಲ್ಮನೆ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ವಹಿಸಲಿದ್ದಾರೆ ಎಂದು ಹೇಳಿದರು.
Next Story





