ಕುಮಟಾ ಗಲಾಟೆ; ಬಿಜೆಪಿ-ಸಂಘ ಪರಿವಾರದವರ ಹತಾಶೆಯ ಕೃತ್ಯ : ಸಿದ್ದರಾಮಯ್ಯ

ಬೆಂಗಳೂರು, ಡಿ. 11: ‘ಉತ್ತರ ಕನ್ನಡದ ಕುಮಟಾದಲ್ಲಿ ಬಿಜೆಪಿ-ಸಂಘ ಪರಿವಾರದವರ ಗಲಾಟೆಯನ್ನು ಗಮನಿಸಿದರೆ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಹತಾಶೆಯಿಂದ ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಸೋಮವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಮತ ಸೆಳೆಯಲು ಕುಮಟಾದಲ್ಲಿ ಗಲಾಟೆ ಮಾಡಲಾಗುತ್ತಿದೆ ಎಂದು ದೂರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರಿಗೆ ರಾಜಕೀಯ ಸಂಸ್ಕೃತಿ ಇಲ್ಲ. ತಾನು ನಲವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದೇನೆ. ನಾನೇಕೆ ನನ್ನನ್ನು ಮೋದಿ ಮತ್ತು ಯಡಿಯೂರಪ್ಪನವರಿಗೆ ಹೋಲಿಕೆ ಮಾಡಿಕೊಳ್ಳಲಿ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.
Next Story





