ಹನೂರು : ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

ಹನೂರು,ಡಿ.11 : ರಾಜ್ಯದಲ್ಲಿ ಸಿದ್ದರಾಮಯ್ಯನವರ ಅವರ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದ್ದು ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ರಾಜ್ಯವನ್ನು ಅಭಿವೃದ್ದಿ ಪಥದತ್ತ ತೆಗೆದುಕೂಂಡು ಹೋಗಿದ್ದಾರೆ ಎಂದು ಶಾಸಕ ಆರ್ ನರೇಂದ್ರ ರಾಜೂ ಗೌಡ ತಿಳಿಸಿದರು.
ಹನೂರು ಕ್ಷೇತ್ರ ವ್ಯಾಪ್ತಿಯ ಲೊಕ್ಕನಹಳ್ಳಿ ಗ್ರಾಮದಲ್ಲಿ ಲೊಕ್ಕನಹಳ್ಳಿ ಮತ್ತು ಹನೂರು ರಸ್ತೆಯ 2.5 ಕೀಲೋ ಮೀಟರ್ ರಸ್ತೆಗೆ 2 ಕೋಟಿ ರೂ. ವೆಚ್ಚದಲ್ಲಿ ಮತ್ತು ಲೊಕ್ಕನಹಳ್ಳಿ ಗ್ರಾಮದ ಸಂಪಗೇಶ್ವರ ದೇವಸ್ಥಾನದ ಬಳಿ ಸುಮಾರು ಅಂದಾಜು 2.20ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣಕ್ಕೆ ಶಿಲಾನ್ಯಾಸ ನೇರವೇರಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತಿದೆ, ಅದರಂತೆ ಇಂದು ಒಡೆಯರಪಾಳ್ಯ ಹಾಗೂ ನೆರೆಯ ರಾಜ್ಯ ತಮಿಳುನಾಡುಗೆ ಸಂಪರ್ಕ ಕಲ್ಪಿಸುವ ಲೊಕ್ಕನಹಳ್ಳಿ ರಸ್ತೆಯೂ ಬಹುದಿನಗಳ ಬೇಡಿಕೆಯಿಂದ ರಸ್ತೆಯನ್ನು ಮಾಡಲಾಗಿತ್ತು, ಉಳಿಕೆ 2.5 ಕೀಲೋ ಮೀಟರ್ ಹಾಗೂ ಗುಂಡಿಗಳ ಮುಚ್ಚಿವಿಕೆಗೆ 2 ಕೋಟಿ ಅನುದಾವನ್ನು ಬಿಡುಗಡೆ ಮಾಡಲಾಗಿದ್ದು, ಇಂದು ಶಿಲಾನ್ಯಾಸ ಮಾಡಲಾಗಿದೆ ಎಂದರು.
ಸಮುದಾಯ ಭವನಗಳಿಗೆ ಶಿಲಾನ್ಯಾಸ : ಹನೂರು ಸಮೀಪದ ಲೊಕ್ಕನಹಳ್ಳಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಚಿಕ್ಕಮಾಲಾಪುರ ಗ್ರಾಮದಲ್ಲಿ 23 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಭವನಗಳು ಕೇವಲ ಮದುವೆ ಸಮಾರಂಭಗಳಿಗೆ ಸೀಮಿತವಾಗದೇ, ಇತರೆ ಸಾಂಸ್ಕೃತಿಕ ಚಟುವಟಿಕೆಗಳಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ಓದಲು ಮತ್ತು ಯುವಕರಿಗೆ ಗ್ರಂಥಾಲಯ ಮಾದರಿಯಲ್ಲಿ ಅವಕಾಶ ಕಲ್ಪಿಸಬೇಕು ಎಂದರು.
ಆದರ್ಶ ಗ್ರಾಮದ ಯೋಜನೆಯಡಿಯಲ್ಲಿ ಗ್ರಾಮಗಳ ಅಭಿವೃದ್ದಿ : ಚಿಕ್ಕಮಾಲಾಪುರ ಗ್ರಾಮವನ್ನು ಪ್ರಧಾನ ಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 1 ಕೋಟಿ ರೂ. ಅನುದಾನವನ್ನು ನೀಡಲಾಗುವುದು,ಇದರಲ್ಲಿ ಗ್ರಾಮದಲ್ಲಿ ಸ್ವಚ್ಚತೆ ಸೇರಿದಂತೆ ರಸ್ತೆಗಳ ಅಭಿವೃದ್ದಿ ಕಾಮಗಾರಿಗಳನ್ನು ಮಾಡಿಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 1.20 ಕೋಟಿ ವೆಚ್ಚದಲ್ಲಿ ಸಿ.ಸಿ.ರಸ್ತೆ ಚರಂಡಿಗಳು ಕಾಮಗಾರಿಗಳು ನಡೆದಿದೆ, ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಆಗಬೇಕಾಗಿರುವ ಅಭಿವೃದ್ದಿ ಕೆಲಸಗಳ ಬಗ್ಗೆ ಕ್ರಮ ವಹಿಸಿ ಜನಪ್ರಧಿನಿಧಿಗಳು ಅಧಿಕಾರಿಗಳ ಜೊತೆ ಚೆರ್ಚಿಸಿ ಗ್ರಾಮವನ್ನು ಅಭಿವೃದ್ದಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂಧರ್ಭದಲ್ಲಿ ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಮರಗಮಣಿ, ಲೇಖಾರವಿಕುಮಾರ್ ,ಶಿವಮ್ಮ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ರಾಜು, ಸದಸ್ಯರಾದ ರುಕ್ಮಿಣಿ, ಲೊಕ್ಕನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ರಂಗಶೆಟ್ಟಿ, ಚಿಕ್ಕಮಾಲಾಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಭಾಗ್ಯಮ್ಮ, ಮಾಜಿ ಅಧ್ಯಕ್ಷೆ ಪ್ರೇಮಾ, ಸದಸ್ಯರುಗಳು ಮುಖಂಡರಾದ ಪಾಳ್ಯ ಕೃಷ್ಣ, ದೊರೆಸ್ವಾಮಿನಾಯ್ಡು, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದರಾಜು ಇನ್ನಿತರರು ಹಾಜರಿದ್ದರು.







