Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಲಾಂ ಸಮ್ಮಿಯವರ ಚೊಚ್ಚಲ ಪುಸ್ತಕ `ಬೆವರು'...

ಸಲಾಂ ಸಮ್ಮಿಯವರ ಚೊಚ್ಚಲ ಪುಸ್ತಕ `ಬೆವರು' ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ13 Dec 2017 4:03 PM IST
share
ಸಲಾಂ ಸಮ್ಮಿಯವರ ಚೊಚ್ಚಲ ಪುಸ್ತಕ `ಬೆವರು ಬಿಡುಗಡೆ

ಮಂಗಳೂರು, ಡಿ.13: ದುಡಿಮೆ ಮತ್ತು ಬೆವರಿಗೆ ನಿಕಟ ಸಂಬಂಧವಿದೆ. ಗಲ್ಫ್ ಉದ್ಯೋಗಿಗಳ ಸಂಪಾದನೆ ಮಾತ್ರ ನಮಗೆ ಕಾಣಿಸುತ್ತದೆ. ಆದರೆ ನಮಗೆ ಅವರ ದುಡಿಮೆಯ ಕಷ್ಟ ತಿಳಿಯುವುದಿಲ್ಲ. ಅವರ ಜೀವನದ ತಳಮಳ, ಏರುಪೇರು, ಸುಖ-ದುಃಖಗಳನ್ನು ಬಹಳ ಮನಮುಟ್ಟುವಂತೆ `ಬೆವರು' ಕಾದಂಬರಿಯಲ್ಲಿ ಪ್ರಸ್ತುತಪಡಿಸಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಇತಿಹಾಸ ಸಂಶೋಧಕಿ ಡಾ. ಹಸೀನಾ ಖಾದ್ರಿ ತಿಳಿಸಿದರು.

ಅವರು ನಗರದ ಕಂಕನಾಡಿಯಲ್ಲಿರುವ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ನ ಸಭಾಂಗಣದಲ್ಲಿ ನಡೆದ `ಬಿಳಿಚುಕ್ಕೆ ಪ್ರಕಾಶನ' ಪ್ರಕಾಶನದ 5ನೇ ಕೃತಿ, ಯುವ ಬರಹಗಾರ ಸಲಾಂ ಸಮ್ಮಿಯವರ ಪುಸ್ತಕ `ಬೆವರು'  ಬಿಡುಗಡೆ ಸಮಾರಂಭದಲ್ಲಿ ಪುಸ್ತಕ ವಿಮರ್ಶಿಸಿ, ಮಾತನಾಡುತ್ತಿದ್ದರು.

ಓದು-ಬರಹ ಅನ್ನೋದು ಯಾವುದೇ ಜಾತಿ ಧರ್ಮದ ಅಥವಾ ಯಾರ ಸೊತ್ತಲ್ಲ. ಇಂದಿನ ಆಧುನಿಕ ಜೀವನದ ಭರಾಟೆಯಲ್ಲಿ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸ್ ಆ್ಯಪ್ ನಲ್ಲಿ ಯುವಕರು ಬರವಣಿಗೆಯನ್ನು ನೆಚ್ಚಿಕೊಂಡಿರುವುದು ಒಳ್ಳೆಯ ಬೆಳವಣಿಗೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಟ್ಯಾಲೆಂಟ್ ಸ್ಥಾಪಕಾಧ್ಯಕ್ಷ ಅಬ್ದುರ್ರವೂಫ್ ಪುತ್ತಿಗೆ, ಯುವಕರ ಒಳ್ಳೆಯತನ, ಪ್ರತಿಭೆಯು ಸಮಾಜಕ್ಕೆ ಪರಿಚಯಿಸುವ ಮನಸ್ಸನ್ನು ಎಲ್ಲರೂ ಬೆಳೆಸಬೇಕು. ಬರಹದ ಮೂಲಕ ಎಲ್ಲರ ಭಾವನೆಗಳು ಪರಿಣಾಮಕಾರಿಯಾಗಿ ಹೊರ ಬರುತ್ತದೆ. ಬೆವರು ಕಾದಂಬರಿಯ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಹೆಜ್ಜೆಯಿಟ್ಟ ಯುವ ಪ್ರತಿಭೆ ಸಲಾಂ ಸಮ್ಮಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಲೇಖಕ ಸಲಾಂ ಸಮ್ಮಿ ತಮ್ಮ ಗಲ್ಫ್ ಜೀವನದ ಅನುಭವಗಳನ್ನು ಹಂಚಿಕೊಂಡು, ತನ್ನ ಈ ಕಾರ್ಯಕ್ಕೆ ಸಹಕಾರ-ಬೆಂಬಲವನ್ನು ನೀಡಿದವರಿಗೆ ಕೃತಜ್ಞತೆ ಸಲ್ಲಿಸಿದರು. 

 ಸನ್ಮಾರ್ಗ ವಾರಪತ್ರಿಕೆ ಸಂಪಾದಕ ಎ.ಕೆ.ಕುಕ್ಕಿಲ, ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಚ ಉಮರ್ ಯು.ಎಚ್. ಉಪಸ್ಥಿತರಿದ್ದರು. ಬಿಳಿಚುಕ್ಕೆ ಪ್ರಕಾಶನದ ಅಧ್ಯಕ್ಷ ಎಸ್.ಎಂ. ಮುತ್ತಲಿಬ್ ಅಧ್ಯಕ್ಷತೆ ವಹಿಸಿದ್ದರು.

ಬಳಿಕ ನಡೆದ ಕವಿಗೋಷ್ಠಿಯಲ್ಲಿ ಸಾಹಿತಿ ಮುಹಮ್ಮದ್ ಬಡ್ಡೂರ್, ಜಲೀಲ್ ಮುಕ್ರಿ, ಆಯಿಷಾ ಯು.ಕೆ., ಎ.ಕೆ.ಕುಕ್ಕಿಲ, ಮತ್ತು ಶಬೀನಾ ಬಾನು ವೈ.ಕೆ. ಕವನ ವಾಚಿಸಿದರು.

ಬಿಳಿಚುಕ್ಕೆ ಪ್ರಕಾಶನದ ಪ್ರಧಾನ ಕಾರ್ಯದರ್ಶಿ ಶೌಕತ್ ಅಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಲೀಂ ಬೋಳಂಗಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X