Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭರವಸೆ ಈಡೇರಿಸದ ರಾಜ್ಯ ಸರಕಾರ:...

ಭರವಸೆ ಈಡೇರಿಸದ ರಾಜ್ಯ ಸರಕಾರ: ಯು.ನಿಸಾರ್‌ ಅಹ್ಮದ್

‘ಪರಿಶಿಷ್ಟರ ಮಾದರಿಯಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷ ಉಪಯೋಜನೆ’

ವಾರ್ತಾಭಾರತಿವಾರ್ತಾಭಾರತಿ13 Dec 2017 10:15 PM IST
share
ಭರವಸೆ ಈಡೇರಿಸದ ರಾಜ್ಯ ಸರಕಾರ: ಯು.ನಿಸಾರ್‌ ಅಹ್ಮದ್

ಬೆಂಗಳೂರು, ಡಿ.13: ಕಾಂಗ್ರೆಸ್ ಪಕ್ಷವು 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಅಲ್ಪಸಂಖ್ಯಾತರಿಗೂ ಪರಿಶಿಷ್ಟರ ಮಾದರಿಯಲ್ಲಿ ವಿಶೇಷ ಉಪಯೋಜನೆ ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಆದರೆ, ಈವರೆಗೆ ಅದನ್ನು ಯಾವ ಕಾರಣಕ್ಕಾಗಿ ಜಾರಿಗೆ ತಂದಿಲ್ಲ ಎಂದು ನಿವೃತ್ತ ಐಪಿಎಸ್ ಅಧಿಕಾರಿ ಯು.ನಿಸಾರ್‌ ಅಹ್ಮದ್ ಪ್ರಶ್ನಿಸಿದರು.

ಬುಧವಾರ ನಗರದ ಅರಮನೆ ಮೈದಾನದ ಟೆನ್ನಿಸ್‌ ಪೆವಿಲಿಯನ್‌ನಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ವತಿಯಿಂದ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ನೀಡಿ ಅವರು ಮಾತನಾಡಿದರು.

ವಿಶೇಷ ಉಪಯೋಜನೆ ಜಾರಿಗೆ ತರಲು ಕಾನೂನು ತೊಡಕು ಏನಾದರೂ ಇದೆಯೇ? ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೆ ಚುನಾವಣಾ ಪ್ರಣಾಳಿಕೆಯಲ್ಲಿ ಯಾಕೆ ಭರವಸೆ ನೀಡಲಾಗಿತ್ತು. ಬೆಂಗಳೂರಿನಲ್ಲಿರುವ ಕೊಳಚೆ ಪ್ರದೇಶಗಳನ್ನು ಅಭಿವೃದ್ಧಿಪಡಿಸಿ ಕಾಲನಿಗಳಾಗಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಐದು ವರ್ಷಗಳಲ್ಲಿ ಒಂದೇ ಒಂದು ಕೊಳಚೆ ಪ್ರದೇಶವನ್ನು ಕಾಲನಿಯಾಗಿ ಅಭಿವೃದ್ಧಿಪಡಿಸಲಾಗಿಲ್ಲ ಎಂದು ಅವರು ಹೇಳಿದರು.

ಡಿ.ಜೆ.ಹಳ್ಳಿಯ ಒಂದು ಪ್ರದೇಶದಲ್ಲಿ 7 ಸಾವಿರ ಮನೆಗಳಿವೆ. ಆದರೆ, ಒಂದು ಶೌಚಾಲಯವು ಸರಕಾರದಿಂದ ನಿರ್ಮಾಣವಾಗಿಲ್ಲ. 50 ವರ್ಷಗಳಿಂದ ನಿಕೃಷ್ಟವಾಗಿ ಜನ ಜೀವನ ಸಾಗಿಸುತ್ತಿದ್ದಾರೆ. ವಿಧಾನಸೌಧದ ಕೂಗಳತೆ ದೂರದಲ್ಲಿರುವ ಮೋಮಿನ್‌ಪುರ ಪ್ರದೇಶದಲ್ಲಿ 4014 ಗುಡಿಸಲುಗಳಿವೆ. ಅಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ ಎಂದು ನಿಸಾರ್‌ಅಹ್ಮದ್ ತಿಳಿಸಿದರು.

ಭಯೋತ್ಪಾದನೆ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟಿರುವವರು ಹಲವಾರು ಮಂದಿ 10-15 ವರ್ಷಗಳ ಬಳಿಕ ನಿರಪರಾಧಿಗಳಾಗಿ ಹೊರ ಬರುತ್ತಿದ್ದಾರೆ. ಇಂತಹ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯಗಳ ಸ್ಥಾಪನೆ ಮಾಡುವ ಭರವಸೆ ನೀಡಲಾಗಿತ್ತು. ಆ ಪ್ರಕ್ರಿಯೆ ಯಾವ ಹಂತದಲ್ಲಿದೆ ಎಂಬುದನ್ನು ಸರಕಾರ ಜನರಿಗೆ ತಿಳಿಸಬೇಕು ಎಂದು ಅವರು ಆಗ್ರಹಿಸಿದರು.

ಯುಎಪಿಎ ಕಾಯ್ದೆಯಡಿಯಲ್ಲಿ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಮೂರು ಮಂದಿಯ ರಾಜ್ಯಮಟ್ಟದ ಸ್ವತಂತ್ರ ಪ್ರಾಧಿಕಾರ ರಚನೆ ಮಾಡಬೇಕಿತ್ತು. ಆದರೆ, ಈವರೆಗೆ ಯಾಕೆ ಅದನ್ನು ಮಾಡಿಲ್ಲ ಎಂದು ನಿಸಾರ್ ಅಹ್ಮದ್ ಪ್ರಶ್ನಿಸಿದರು.

ರಾಷ್ಟ್ರಮಟ್ಟದಲ್ಲಿ ಮುಸ್ಲಿಮರಲ್ಲಿ ಶೇ.42.72ರಷ್ಟು ಮಂದಿ ಅನಕ್ಷರಸ್ಥರಿದ್ದಾರೆ. ರಾಜ್ಯದಲ್ಲಿ 80 ಲಕ್ಷ ಜನಸಂಖ್ಯೆ ಹೊಂದಿರುವ ಮುಸ್ಲಿಮರಲ್ಲಿ ಪಿಯುಸಿ ವರೆಗೆ 4.80 ಲಕ್ಷ ಮಂದಿ ಇದ್ದರೆ, ಪದವೀಧರರ ಪ್ರಮಾಣ ಶೇ.2.76ರಷ್ಟು ಮಾತ್ರ. 75.20 ಲಕ್ಷ ಮಂದಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದವರಿದ್ದಾರೆ ಎಂದು ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು.

ಬಿಬಿಎಂಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ‘ಕೊಳಚೆ ಪ್ರದೇಶ ಮುಕ್ತ ಬೆಂಗಳೂರು’ ಎಂದು ಘೋಷಿಸಲಾಗಿದೆ. ಕೊಳಚೆ ಪ್ರದೇಶಗಳಲ್ಲಿ ಹೆಚ್ಚಾಗಿ ಮುಸ್ಲಿಮರು, ದಲಿತರು, ಹಿಂದುಳಿದ ವರ್ಗದವರು ವಾಸಿಸುತ್ತಾರೆ. ಇವರ ಕಲ್ಯಾಣಕ್ಕಾಗಿ ಸರಕಾರ ಒದಗಿಸುವ ಕೋಟ್ಯಂತರ ರೂ.ಹಣ ಯಾವ ರೀತಿಯಲ್ಲಿ ಬಳಕೆಯಾಗುತ್ತಿದೆ ಎಂಬುದು ಜನರಿಗೆ ಗೊತ್ತಾಗಬೇಕು ಎಂದು ನಿಸಾರ್‌ಅಹ್ಮದ್ ಒತ್ತಾಯಿಸಿದರು.

ಕಾಂಗ್ರೆಸ್ ಸರಕಾರವು ಅಲ್ಪಸಂಖ್ಯಾತರ ಕಲ್ಯಾಣದ ಬಜೆಟ್ ಹೆಚ್ಚಳ ಮಾಡಿದ್ದು, ವಸತಿ ಶಾಲೆಗಳ ಹೆಚ್ಚಳ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು, ಶಾದಿ ಭಾಗ್ಯ, ಉನ್ನತ ವ್ಯಾಸಂಗಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೇರಿದಂತೆ ಅನೇಕ ಯಶಸ್ವಿ ಕಾರ್ಯಕ್ರಮಗಳನ್ನು ಸರಕಾರ ಮಾಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಜೈನ ಸಮುದಾಯ 8 ಲಕ್ಷ ಜನಸಂಖ್ಯೆ ಹೊಂದಿದೆ. ಆದರೆ, ಇಲ್ಲಿನ ಹಲವರಿಗೆ ತಮಗೆ ಅಲ್ಪಸಂಖ್ಯಾತ ಸ್ಥಾನಮಾನವಿದೆ ಎಂಬುದೆ ಗೊತ್ತಿಲ್ಲ. ಸರಕಾರಿ ಕಚೇರಿಗಳಲ್ಲಿ ನಮಗೆ ಜಾತಿ ಪ್ರಮಾಣ ಪತ್ರ ನೀಡುವಾಗ ಅಲ್ಪಸಂಖ್ಯಾತರು ಎಂದು ನಮೂದಿಸುವುದಿಲ್ಲ. ಇದರಿಂದ, ನಾವು ಸರಕಾರಿ ಯೋಜನೆಗಳಿಂದ ವಂಚಿತರಾಗು ತ್ತಿದ್ದೇವೆ ಎಂದು ಜೈನ ಸಮುದಾಯದ ಪ್ರತಿನಿಧಿಗಳು ಅಳಲು ತೋಡಿಕೊಂಡರು.

ಅಲ್ಪಸಂಖ್ಯಾತರ ಆಯೋಗದಲ್ಲಿ ಪಾರ್ಸಿ, ಜೈನ ಹಾಗೂ ಬೌದ್ಧ ಸಮುದಾಯದವರಿಗೂ ಪ್ರಾತಿನಿಧ್ಯ ಸಿಗಬೇಕು ಎಂದು ಆಯಾ ಸಮುದಾಯದ ಮುಖಂಡರು ಸರಕಾರದ ಮುಂದೆ ಬೇಡಿಕೆ ಮಂಡಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಸಚಿವ ಕೆ.ಆರ್.ರಮೇಶ್‌ಕುಮಾರ್, ತನ್ವೀರ್‌ಸೇಠ್, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಮಾಜಿ ಕೇಂದ್ರ ಸಚಿವರಾದ ಜಾಫರ್ ಶರೀಫ್, ಕೆ.ರಹ್ಮಾನ್‌ಖಾನ್, ವಿಧಾನಪರಿಷತ್ ಸದಸ್ಯ ರಾದ ಸಿ.ಎಂ. ಇಬ್ರಾಹೀಮ್, ಕೆ.ಅಬ್ದುಲ್ ಜಬ್ಬಾರ್, ಶಾಸಕ ಬಿ.ಎ.ಮೊಹಿಯುದ್ದೀನ್ ಬಾವ, ಎನ್.ಎ.ಹಾರೀಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X