ಡಿ.19: ಜಿಲ್ಲಾ ಮಟ್ಟದ ಪ್ರಬಂಧ -ಚರ್ಚಾ ಸ್ಪರ್ಧೆ
ಉಡುಪಿ, ಡಿ.14: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸ ಲಾಗಿದೆ.
ಉಡುಪಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಡಿ.19ರಂದು ಬೆಳಗ್ಗೆ 10.15ಕ್ಕೆ ‘ಸಹಕಾರಿ ವ್ಯವಸ್ಥೆ ಒಂದು ಆದರ್ಶ ಜೀವನ ವಿಧಾನ’ ಕುರಿತು ಪ್ರಬಂಧ ಸ್ಪರ್ಧೆ ಮತ್ತು ಬೆಳಗ್ಗೆ 11.15ಕ್ಕೆ ‘ಸಮಾಜದ ಶೋಷಣೆ ನಿರ್ಮೂಲನೆಗೆ ಸಹಕಾರ ತತ್ವವೊಂದೇ ಪರಿಣಾಮಕಾರಿ ಸಾಧನ’ ಕುರಿತು ಚರ್ಚಾ ಸ್ಪರ್ಧೆ ನಡೆಯಲಿದೆ.
ಜಿಲ್ಲಾ ಮಟ್ಟದ ಪ್ರಬಂಧ ಸ್ಫರ್ಧೆಯಲ್ಲಿ ವಿಜೇತರಾದ ಮೂವರು ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿರುವರು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣದರ, ಊಟ-ಉಪಹಾರದ ವೆಚ್ಚವನ್ನು ಭರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
Next Story





