ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಮೃತ್ಯು
ಶಿವಮೊಗ್ಗ, ಡಿ. 14: ವೇಗವಾಗಿ ಆಗಮಿಸಿದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಯಡೇಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.
ಮುತ್ತಿನಕೊಪ್ಪ ಗ್ರಾಮದ ನಿವಾಸಿ ಜಾಫರ್ ಸಿದ್ದಿಕ್ ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇವರು ಕಾರ್ಯನಿಮಿತ್ತ ಚೆನ್ನಗಿರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





