ಅಕ್ರಮ ಮರಳು ಸಾಗಣೆ: 3 ಟ್ರ್ಯಾಕ್ಟರ್ ವಶ
ಶಿವಮೊಗ್ಗ, ಡಿ. 14: ಪರವಾನಿಗೆಯಿಲ್ಲದೆ ಕಾನೂನುಬಾಹಿರವಾಗಿ ಮರಳು ಸಾಗಣೆ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಚಾಲಕರ ಸಮೇತ ಮೂರು ಟ್ರ್ಯಾಕ್ಟರ್ ವಶಕ್ಕೆ ಪಡೆದ ಘಟನೆ ಜಿಲ್ಲೆಯ ಸೊರಬ ಪಟ್ಟಣದಲ್ಲಿ ನಡೆದಿದೆ.
ಖಚಿತ ವರ್ತಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಸೊರಬ-ಶಿರಾಳಕೊಪ್ಪರಸ್ತೆಯ ಜೂನಿಯರ್ ಕಾಲೇಜು ಬಳಿ ಟ್ರ್ಯಾಕ್ಟರ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಟ್ರ್ಯಾಕ್ಟರ್ ಮಾಲಕ ಹಾಗೂ ಚಾಲಕರ ವಿರುದ್ಧ ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





