Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ ಐದು ತಿಂಗಳಲ್ಲಿ ಬಿಜೆಪಿ ಖಜಾನೆ...

ಕಳೆದ ಐದು ತಿಂಗಳಲ್ಲಿ ಬಿಜೆಪಿ ಖಜಾನೆ ಸೇರಿದ 80,000 ಕೋ.ರೂ.ದೇಣಿಗೆ: ಅಣ್ಣಾ ಹಝಾರೆ

ವಾರ್ತಾಭಾರತಿವಾರ್ತಾಭಾರತಿ15 Dec 2017 7:20 PM IST
share
ಕಳೆದ ಐದು ತಿಂಗಳಲ್ಲಿ ಬಿಜೆಪಿ ಖಜಾನೆ ಸೇರಿದ 80,000 ಕೋ.ರೂ.ದೇಣಿಗೆ: ಅಣ್ಣಾ ಹಝಾರೆ

ಗುವಾಹಟಿ,ಡಿ.15: ಶುಕ್ರವಾರ ಇಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ತೀವ್ರ ದಾಳಿಯನ್ನು ನಡೆಸಿದ ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಝಾರೆ ಅವರು, ಎನ್‌ಡಿಎ ಸರಕಾರದ ಕಳೆದ ಮೂರು ವರ್ಷಗಳ ಆಡಳಿತದಲ್ಲಿ ದೇಶವು ಏಷ್ಯಾದಲ್ಲಿಯೇ ಅತ್ಯಂತ ಭ್ರಷ್ಟವೆಂಬ ಪಟ್ಟಕ್ಕೇರಿದೆ ಎಂದು ಹೇಳಿದರು. ಕಳೆದ ಐದು ತಿಂಗಳುಗಳಲ್ಲಿ 80,000 ಕೋ.ರೂ.ಗಳು ದೇಣಿಗೆಗಳ ರೂಪದಲ್ಲಿ ಬಿಜೆಪಿಯ ಖಜಾನೆಯನ್ನು ಸೇರಿವೆ ಎಂದು ಅವರು ಪ್ರತಿಪಾದಿಸಿದರು.

ಅಂತರರಾಷ್ಟ್ರೀಯ ಪಾರದರ್ಶಕತೆ ಸಮೀಕ್ಷೆಯೊಂದನ್ನು ಉಲ್ಲೇಖಿಸಿರುವ ಫೋರ್ಬ್ಸ್ ಮ್ಯಾಗಝಿನ್‌ನಲ್ಲಿಯ ಲೇಖನವೊಂದನ್ನು ಪ್ರಸ್ತಾಪಿಸಿದ ಅವರು, ಏಷ್ಯಾದ ಭ್ರಷ್ಟ ರಾಷ್ಟ್ರಗಳಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ ಎಂದರು.

ಹೊಸ ಸರಕಾರವೊಂದು ಅಧಿಕಾರಕ್ಕೆ ಬಂದಾಗ ಅದಕ್ಕೆ ಕೊಂಚ ಸಮಯವನ್ನು ನೀಡಬೇಕಾಗುತ್ತದೆ. ಹೀಗಾಗಿ ಕಳೆದ ಮೂರು ವರ್ಷಗಳಿಂದಲೂ ತಾನು ಮೌನವಾಗಿದ್ದೆ. ಆದರೆ ಈಗ ಮಾತನಾಡುವ ಸಮಯ ಬಂದಿದೆ. ಮುಂದಿನ ವರ್ಷದ ಮಾ.23ರಿಂದ ಪ್ರಬಲ ಲೋಕ ಜನಪಾಲ್‌ಗಾಗಿ ಮತ್ತು ಈ ದೇಶದ ರೈತರಿಗಾಗಿ ಇನ್ನೊಂದು ಆಂದೋಲನವನ್ನು ತಾನು ಆರಂಭಿಸಲಿದ್ದೇನೆ ಎಂದು ಅವರು ಘೋಷಿಸಿದರು.

ಸಾಮಾನ್ಯ ಜನರು ಈಗಲೂ ಸಮಸ್ಯೆಗಳಲ್ಲಿ ತೊಳಲಾಡುತ್ತಿದ್ದಾರೆ. ದೇಶದ ರೈತರು ಸಂಕಷ್ಟಗಳಿಂದ ನರಳುತ್ತಿದ್ದಾರೆ. ಬ್ಯಾಂಕುಗಳು ರೈತರಿಗೆ ಸಾಲಗಳನ್ನು ನೀಡುತ್ತಿವೆ, ಆದರೆ ತಮ್ಮ ಮನಸೋಇಚ್ಛೆ ಬಡ್ಡಿಯನ್ನು ಹೇರುತ್ತಿವೆ. ಆರ್‌ಬಿಐ ಎಲ್ಲ ರೈತರಿಗಾಗಿ ಬಡ್ಡಿದರ ವೊಂದನ್ನು ನಿಗದಿಗೊಳಿಸಬೇಕು ಎಂದ ಅವರು, ಸಾಲಗಳ ಮರುಪಾವತಿಗೆ ತಮ್ಮ ಬೆಳೆಗಳಿಗೆ ಒಳ್ಳೆಯ ಬೆಲೆಗಳನ್ನು ಪಡೆಯುವಲ್ಲಿ ವಿಫಲರಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರು ಬೆಳೆದ ಭತ್ತಕ್ಕೆ ಬೆಂಬಲ ಬೆಲೆ ಸಿಗುತ್ತಿಲ್ಲ ಎಂದರು.

ಕಳೆದ ಮೂರು ವರ್ಷಗಳಲ್ಲಿ ತಾನು ಪ್ರಧಾನಿ ನರೇಂದ್ರ ಮೋದಿಯವರಿಗೆ 32 ಪತ್ರಗಳನ್ನು ಬರೆದಿದ್ದರೂ, ಪ್ರಧಾನಿ ಕಚೇರಿಯು ಒಂದಕ್ಕೂ ಉತ್ತರಿಸಿಲ್ಲ ಎಂದರು.

ಆಗಿನ ಪ್ರಧಾನಿ ಮನಮೋಹನ ಸಿಂಗ್ ನೇತೃತ್ವದ ಯುಪಿಎ ಸರಕಾರವು ದುರ್ಬಲ ಜನ ಲೋಕಪಾಲ್ ಮಸೂದೆಯನ್ನು ಸಿದ್ಧಗೊಳಿಸಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರವು ಅದನ್ನು ಇನ್ನಷ್ಟು ದುರ್ಬಲಗೊಳಿಸಿದೆ. ಅಧಿಕಾರಿಗಳು ತಮ್ಮ ಆಸ್ತಿ ಘೋಷಿಸುವುದನ್ನು ಕಡ್ಡಾಯಗೊಳಿಸಿದ್ದ ನಿಯಮವನ್ನು ಎನ್‌ಡಿಎ ಸರಕಾರವು ರದ್ದುಗೊಳಿಸಿದೆ. ಕಂಪನಿಗಳು ತಮ್ಮ ಲಾಭದ ಶೇ.7.5ರಷ್ಟನ್ನು ರಾಜಕೀಯ ಪಕ್ಷಗಳಿಗೆ ದೇಣಿಗೆಯನ್ನಾಗಿ ನೀಡಲು ಅವಕಾಶವಿತ್ತು,ಆದರೆ ಈಗ ಅವು ಎಷ್ಟೇ ಮೊತ್ತವನ್ನಾದರೂ ರಾಜಕೀಯ ಪಕ್ಷಗಳಿಗೆ ದೇಣಿಗೆಯನ್ನಾಗಿ ನೀಡಬಹುದಾಗಿದೆ ಎಂದು ಹಝಾರೆ ಬೆಟ್ಟು ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X