Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋರ್ಟ್ ಆದೇಶ ಜಾರಿಗೆ ಒತ್ತಾಯಿಸಿ ಧರಣಿ

ಕೋರ್ಟ್ ಆದೇಶ ಜಾರಿಗೆ ಒತ್ತಾಯಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ15 Dec 2017 7:23 PM IST
share
ಕೋರ್ಟ್ ಆದೇಶ ಜಾರಿಗೆ ಒತ್ತಾಯಿಸಿ ಧರಣಿ

ಮಂಡ್ಯ, ಡಿ.15: ವಡ್ಡರ್, ಲಮಾಣಿ, ಕೊರಚರ ಮತ್‍ಉ ಕೊರವರ ಜನಾಂಗವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಿರುವುದನ್ನು ಹೈಕೋರ್ಟ್ ರದ್ದುಪಡಿಸಿದ್ದು, ಕೂಡಲೇ ಕೋರ್ಟ್ ಆದೇಶ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಕಾರ್ಯಕರ್ತರು  ಶುಕ್ರವಾರ ಧರಣಿ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದರು ಧರಣಿ ನಡೆಸಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ಮತ್ತು ಜೆಡಿಎಸ್ ಹಾಗು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

1980ರ ಮುಖ್ಯಮಂತ್ರಿ ಗುಂಡೂರಾವ್ ನೇತೃತ್ವದ ಕಾಂಗ್ರೆಸ್ ಸರಾಕರ ಒಬಿಸಿ ಜಾತಿಗಳಾದ ಲಮಾಣಿ, ವಡ್ಡರ, ಕೊರಚರ, ಕೊರವರನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಿ ಅಸ್ಪøಶ್ಯ ಜನಾಂಗ ರಾಜಕೀಯ, ಆರ್ಥಿಕ, ನಾಗರಿಕ ಸೇವೆಗಳಿಂದ ವಂಚಿತರನ್ನಾಗಿ ಮಾಡಿತು ಎಂದು ಅವರು ಆರೋಪಿಸಿದರು.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಡ್ಡರ, ಲಮಾಣಿ, ಕೊರಚರ, ಕರವರ ಜನಾಂಗವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಿರುವುದು ಸಂವಿಧಾನ ವಿರೋಧಿಯಾಗಿದೆಯೆಂದು ನವೆಂಬರ್ 12 2002 ರಲ್ಲಿ ಹೈಕೋಟ್ ರದ್ದುಪಡಿಸಿ ಆದೇಶ ಹೊರಡಿಸಿದೆ. ಆದರೆ, ಕೋರ್ಟ್ ಆದೇಶವನ್ನು ಇದುವರೆಗೂ ಜಾರಿಗೊಳಿಸಿಲ್ಲ ಎಂದು ಧರಣಿನಿರತರು ದೂರಿದರು.

ಸ್ಪರ್ಶ ಜಾತಿಗಳಾದ ವಡ್ಡರ್, ಲಮಾಣಿ, ಕೊರಚರ, ಕೊರವರ ಜನಾಂಗವನ್ನು ರಕ್ಷಣೆ ಮಾಡುವುದಕ್ಕೋಸ್ಕರ ನ್ಯಾ.ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುತ್ತಿಲ್ಲ. ಈ ವಿಷಯದಲ್ಲಿ ಕಾಂಗ್ರೆಸ್ ಜತೆಗೆ ಬಿಜೆಪಿ ಮತ್ತು ಜೆಡಿಎಸ್ ಕೈಜೋಡಿಸಿವೆ ಎಂದೂ ಅವರು  ಆಪಾದಿಸಿದರು.

 ಸರಕಾರದ ಕ್ರಮದಿಂದ ಅಸ್ಪøಶ್ಯರು ರಾಜಕೀಯ, ಆರ್ಥಿಕ, ಶೈಕ್ಷಣಿಕ, ಸರಕಾರಿ ಉದ್ಯೋಗ, ಸಮಾಜಿಕವಾಗಿ ವಂಚನೆಗೊಳಗಾಗುತ್ತಿದ್ದು, ಕೂಡಲೇ ಹೈಕೋರ್ಟ್ ಆದೇಶವನ್ನು ಜಾರಿಗೊಳಿಸಿ ರಕ್ಷಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಸಿ.ಎಂ.ಕೃಷ್ಣ, ಹನಕೆರೆ ಶ್ರೀಕಂಠ, ಪ್ರವೀಣ್‍ಕುಮಾರ್, ನವೀನ್, ರಾಜೇಶ್, ಸೋಮಶೇಖರ್, ಕಾರ್ತಿಕ್, ಕೇಶವಮೂರ್ತಿ, ಅನಿಲ್‍ಕುಮಾರ್, ಇತರರು ಧರಣಿಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X