ಕೋಮುಗಲಭೆಗೆ ಕುಮ್ಮಕ್ಕು ಆರೋಪ : ಸಂಸದ ಪ್ರತಾಪ್ ಸಿಂಹ ವಿರುದ್ಧ ಮೊಕದ್ದಮೆ ದಾಖಲು

ಬೆಂಗಳೂರು, ಡಿ.15:ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣಗಳಲ್ಲಿ ಕೋಮುಗಲಭೆ ನಡೆಯಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನ ಅನ್ವಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಎರಡು ಗುಂಪಿನ, ಎರಡು ಧರ್ಮದ ನಡುವೆ ಹಾಗೂ ಸಮಾಜದಲ್ಲಿ ಶಾಂತಿ ಸಾಮರಸ್ಯವನ್ನು ಕದಡಿ ಕೋಮುದಳ್ಳುರಿಯನ್ನು ಕೆದಕಲು ಸಾಮಾಜಿಕ ಜಾಲತಾಣಗಳಲ್ಲಿ ವಿವಾದಿತ ಪೋಸ್ಟ್‌ಗಳನ್ನು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಕುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಸದಸ್ಯ ಎ.ಆನಂದ ಅವರು, ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಎ.ಆನಂದ್, ಸಂಸದ ಪ್ರತಾಪ್ ಸಿಂಹ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505, 153ಎ ಅಡಿ ಮೊಕದ್ದಮೆ ದಾಖಲಾಗಿದ್ದು, ಈ ಸಂಬಂಧ ಪೊಲೀಸರು ಸೂಕ್ತ ಕ್ರಮ ಕೈಗೊಂಡು ಸಮಾಜದಲ್ಲಿ ಶಾಂತಿ ನೆಲೆಸುವ ವಾತಾವರಣ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದರು.
Next Story





