Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ‘ಸುವ್ಯವಸ್ಥಿತ ಪರ್ಯಾಯ ಆಚರಣೆಗೆ...

ಉಡುಪಿ: ‘ಸುವ್ಯವಸ್ಥಿತ ಪರ್ಯಾಯ ಆಚರಣೆಗೆ ಜಿಲ್ಲಾಡಳಿತ ನೆರವು’

ವಾರ್ತಾಭಾರತಿವಾರ್ತಾಭಾರತಿ15 Dec 2017 9:58 PM IST
share
ಉಡುಪಿ: ‘ಸುವ್ಯವಸ್ಥಿತ ಪರ್ಯಾಯ ಆಚರಣೆಗೆ ಜಿಲ್ಲಾಡಳಿತ ನೆರವು’

ಉಡುಪಿ, ಡಿ.15: ನಗರದೊಳಗಿನ ರಸ್ತೆಯ ಹೊಂಡಗುಂಡಿ ಮುಚ್ಚಲು ಉಡುಪಿ ನಗರಸಭೆಗೆ ಒಂದು ಕೋಟಿ ರೂ. ಅನುದಾನವನ್ನು ನೀಡಲಾಗಿದ್ದು, ಪರ್ಯಾಯದ ವೇಳೆ ಉಡುಪಿ ನಗರ ಸ್ವಚ್ಛ ಹಾಗೂ ಸೌಂದರ್ಯದಿಂದ ಕಂಗೊಳಿಸ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉಡುಪಿ ನಗರಸಭೆ ಪೌರಾಯುಕ್ತರಿಗೆ ಖಡಕ್ ಸೂಚನೆ ನೀಡಿದರು.

ಸಚಿವರ ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಫಲಿಮಾರು ಮಠದ ಪರ್ಯಾಯ ಪೂರ್ವಭಾವಿ ಸಭೆ ಯನುದ್ದೇಶಿಸಿ ಅವರು ಮಾತನಾಡಿದರು. ಪರ್ಯಾಯದ ವೇಳೆ ಜಿಲ್ಲಾಡಳಿತ ಒದಗಿಸುವ ನೆರವು ಹಾಗೂ ಪೂರಕ ಕ್ರಮಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಕ್ತ ನಿರ್ದೇಶನ ನೀಡಿದರಲ್ಲದೆ, ಡಿ.30ರೊಳಗೆ ಎಲ್ಲ ರಸ್ತೆಗಳು ಹೊಂಡ ಮುಕ್ತವಾಗಿ ರಬೇಕೆಂದರು.

ಫಲಿಮಾರು ಮಠದ ಸ್ವಾಗತ ಸಮಿತಿ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಮಾತನಾಡಿ, ಈ ಬಾರಿ ಪುರಪ್ರವೇಶ ಹಾಗೂ ಪರ್ಯಾಯ ಮೆರವಣಿಗೆ ಗಳೆರಡೂ ಒಂದೇ ಮಾರ್ಗದಲ್ಲಿ ಸಂಚರಿಸಲಿದ್ದು ಟ್ಯಾಬ್ಲೊ ಸಂಚಾರಕ್ಕೆ ಅನುವು ಮಾಡಿಕೊಡಲು ಮನವಿ ಮಾಡಿದರು. 16 ಫೀಟ್‌ಗಿಂತ ಎತ್ತರದ ಟ್ಯಾಬ್ಲೊಗಳು ಇರದಂತೆ ನೋಡಿಕೊಳ್ಳಿ ಎಂದ ಸಚಿವರು, ಮೆಸ್ಕಾಂ ಮತ್ತು ಬಿಎಸ್‌ಎನ್‌ಎಲ್ ಹಾಗೂ ಕೇಬಲ್ ವಯರ್‌ಗಳನ್ನು ಅಳವಡಿಸಿದವರು ರಸ್ತೆಗಳಲ್ಲಿ ವಯರ್‌ಗಳು ಇದಂತೆ ನೋಡಿಕೊಳ್ಳಬೇಕೆಂದರು.

ಅದೇ ರೀತಿ ರಸ್ತೆಗಳ ತುಂಬಾ ಹೋರ್ಡಿಂಗ್ಸ್, ಬಂಟಿಂಗ್ಸ್ ಹಾಗೂ ಬ್ಯಾನರ್ ಗಳನ್ನು ಯಾರೇ ಹಾಕುವುದಿದ್ದರೂ ಪೊಲೀಸ್ ಮತ್ತು ನಗರಸಭೆಯ ಅನುಮತಿ ಅಗತ್ಯವಾಗಿದ್ದು, ಇಲಾಖೆಗಳು ಅನುಮತಿಯನ್ನು 24 ಗಂಟೆಯೊಳಗಾಗಿ ನೀಡಲು ಸಚಿವರು ಆದೇಶಿಸಿದರು.

ಆರೋಗ್ಯ ಸುರಕ್ಷೆ, ನೀರು ಪೂರೈಕೆ, ವಿದ್ಯುತ್ ವ್ಯತ್ಯಯವಾಗದಂತೆ ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಪ್ರವಾಸೋದ್ಯಮ ಇಲಾಖೆ ಪರ್ಯಾಯಕ್ಕೆ ವಿವಿಧೆಡೆಗಳಿಂದ ಆಕರ್ಷಿಸಲು ಕೆಎಸ್‌ಟಿಡಿಸಿ ಯೊಂದಿಗೆ ಸಮನ್ವಯ ಸಾಧಿಸಿ ಟೂರ್ ಪ್ಯಾಕೇಜ್ ರೂಪಿಸುವಂತೆ ಸಲಹೆ ನೀಡಿದರು.

ನಗರಸಭೆ ಶೌಚಾಲಯ ನಿರ್ವಹಣೆ ಸಂಬಂಧ ಸೂಕ್ತ ಕ್ರಮಗಳನ್ನು ಕೈಗೊಳ್ಳ ಬೇಕು ಎಂದ ಸಚಿವರು, ಪರ್ಯಾಯ ಸಮಿತಿಗೂ ಹೆಚ್ಚಿನ ಹೊಣೆ ಇದ್ದು, ಸ್ವಚ್ಛತೆ ಅದರಲ್ಲೂ ಮುಖ್ಯವಾಗಿ ಹಸಿಕಸ ನಿರ್ವಹಣೆಗೆ ವಿಶೇಷ ಒತ್ತು ನೀಡುವಂತೆ ತಿಳಿಸಿದರು. ಸಮಾರಂಭಕ್ಕೆ ಆಗಮಿಸುವ ವಿಐಪಿಗಳ ಪಟ್ಟಿಯನ್ನು ಮುಂಚಿತವಾಗಿ ನೀಡಬೇಕೆಂದ ಅವರು, ಹೊರೆಕಾಣಿಕೆ ಬರುವ ಮಾರ್ಗದಲ್ಲೂ ಪೊಲೀಸ್ ಭದ್ರತೆ ನೀಡಬೇಕೆಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಪಂ ಸಿಇಓ ಶಿವಾನಂದ ಕಾಪಶಿ, ಅಪರ ಜಿಲ್ಲಾಧಿಕಾರಿ ಅನುರಾಧ ಉಪಸ್ಥಿತರಿದ್ದರು. ವಿವಿಧ ಇಲಾಖೆ ಅಧಿಕಾರಿಗಳು, ವುಠದ ಪ್ರತಿನಿಧಿಗಳು ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X