ಲಾರಿ- ರಿಕ್ಷಾ ಢಿಕ್ಕಿ: ಪ್ರಯಾಣಿಕ ಮೃತ್ಯು

ಕುಂದಾಪುರ, ಡಿ.15: ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಡಿ.15ರಂದು ನಸುಕಿನ ವೇಳೆ 1:50ರ ಸುಮಾರಿಗೆ ನಡೆದಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿ ಗಣೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರಿಕ್ಷಾ ಚಾಲಕ ಚಂದ್ರಶೇಖರ ಎಂಬವರು ಗಂಭೀರ ವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಣೇಶ್ ಪೂಜಾರಿ ಕುಂದಾಪುರ ಶಾಸ್ತ್ರೀ ಸರ್ಕಲ್‌ನಿಂದ ಹೆಮ್ಮಾಡಿ ಸಮೀಪದ ಕನ್ನಡಕುದ್ರುವಿನಲ್ಲಿರುವ ತನ್ನ ಹೆಂಡತಿ ಮನೆಗೆ ರಿಕ್ಷಾದಲ್ಲಿ ಹೋಗುತ್ತಿದ್ದಾಗ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಲಾರಿಯು ಎದುರಿ ನಿಂದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರ ಪರಿಣಾಮ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಗಣೇಶ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
Next Story





