Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ- ಯೋಗ...

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ- ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Dec 2017 11:10 PM IST
share
ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ- ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ

ಬೆಳ್ತಂಗಡಿ, ಡಿ. 15: ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಕ್ಕೆ ಇಂದು ದೇಶ ವಿದೇಶಗಳಲ್ಲಿ ಮಾನ್ಯತೆ ಇದೆ. ಉತ್ತಮ ಸೇವೆ-ಸಾಧನೆಗೆ ಸಾಕಷ್ಟು ಅವಕಾಶಗಳಿವೆ. ನೂತನ ಪದವೀಧರರು ತಜ್ಞರಾಗಿ ಬದ್ಧತೆಯಿಂದ ಆರೋಗ್ಯ ಭಾಗ್ಯ ಕಾಪಾಡಲು ಕಟಿಬದ್ಧರಾಗಿ ಸೇವೆ ಮಾಡಬೇಕು ಎಂದು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಕಾರ್ಯದರ್ಶಿ ವೈದ್ಯ ರಾಜೇಶ್ ಕೊಟೇಚ ಹೇಳಿದರು.

ಅವರು ಶುಕ್ರವಾರ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಪೂರೈಸಿದ 106 ಮಂದಿಗೆ ಪದವಿ ಪ್ರದಾನ ಮಾಡಿ ಮಾತನಾಡಿದರು.

ಧರ್ಮಸ್ಥಳದಲ್ಲಿ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಪರಿಶುದ್ಧ ಪ್ರಕೃತಿ ಚಿಕಿತ್ಸಾ ಕ್ರಮವನ್ನು ಅಳವಡಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ದೇಶದಲ್ಲೇ ಪ್ರಥಮವಾಗಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಆಯುಷ್ ಮಂತ್ರಾಲಯದಿಂದ ಉತ್ಕೃಷ್ಟತಾ ಕಾಲೇಜು ಎಂಬ ಮಾನ್ಯತೆ ನೀಡಲಾಗಿದೆ ಎಂದರು. ಕಾಲೇಜು ಅಲ್ಪಾವಧಿಯಲ್ಲಿ ಉನ್ನತ ಸಾಧನೆ ಮಾಡಿದೆ ಎಂದು ಶ್ಲಾಘಿಸಿದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ತಾತ್ಕಾಲಿಕ ಸುಖ-ಸಂತೋಷದ ಲಾಲಸೆಯಿಂದ ಆರೋಗ್ಯವನ್ನು ಕಳೆದುಕೊಳ್ಳಬಾರದು. ಪಂಚೇಂದ್ರಿಯಗಳ ನಿಯಂತ್ರಣದಿಂದ ಆರೋಗ್ಯ ಭಾಗ್ಯ ರಕ್ಷಣೆ ಸಾಧ್ಯವಾಗುತ್ತದೆ.

ನೂತನ ಪದವೀಧರರು ಯೋಗ ವಿಜ್ಞಾನ ಮತ್ತು ಪ್ರಕೃತಿ ಚಿಕಿತ್ಸಾ ವಿಧಾನದ ರಾಯಬಾರಿಗಳಾಗಿ, ಕೀಳರಿಮೆ ಇಲ್ಲದೆ ಮಾನವ ಜನಾಂಗದ ಸನ್ಮಿತ್ರರಾಗಿ, ಮಾರ್ಗದರ್ಶಕರಾಗಿ ಆರೋಗ್ಯ ರಕ್ಷಣೆಗೆ ಸಹಕಾರ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ದೆಹಲಿಯಲ್ಲಿ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಆಪ್ತ ವೈದ್ಯಕೀಯ ಸಲಹೆಗಾರರಾಗಿ ನೇಮಕವಾದ ಡಾ. ಕನಕ್ ಸೋನಿ ತಮ್ಮ ಅನುಭವ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಸ್ವಾಗತಿಸಿದರು. ಡಾ. ಶಿವಪ್ರಸಾದ ಶೆಟ್ಟಿ ವಂದಿಸಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ಮತ್ತು ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಉಪಸ್ಥಿತರಿದ್ದರು. ಡಾ. ಚಂದ್ರಕಾಂತ್ ಮತ್ತು ಡಾ. ಜ್ಯೋಸ್ನಾ ಥಾಯಿಲ್ ಕಾರ್ಯಕ್ರಮ ನಿರ್ವಹಿಸಿದರು. 97 ಮಂದಿ ಪದವೀಧರರು ಹಾಗೂ 9 ಮಂದಿ ಸ್ನಾತಕೋತ್ತರ ಪದವೀಧರರಿಗೆ ಪದವಿ ಪ್ರದಾನ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X