ಕೊಳ್ಳೇಗಾಲ;ರಸ್ತೆ ಅಪಘಾತ - ಗಾಯಾಳು ಮೃತ್ಯು
ಕೊಳ್ಳೇಗಾಲ,ಡಿ.16: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ. ತಾಲ್ಲೂಕಿನ ಮಧುವನಹಳ್ಳಿ ಗ್ರಾಮದ ನಂಜುಂಡ(35) ಎಂಬವರು ಮೃತಪಟ್ಟ ವ್ಯಕ್ತಿ.
ಡಿ.14 ರಂದು ಮಧುವನಹಳ್ಳಿ ಗ್ರಾಮದ ಟೆಲಿಫೋನ್ ಎಕ್ಸಚೇಚ್ ಮುಂಭಾಗದಲ್ಲಿ ಎರಡು ಬೈಕ್‍ಗಳ ನಡುವೆ ಢಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್‍ಗಳ ಸವಾರರು ಗಾಯಗೊಡು ಚಿಕಿತ್ಸೆ ಪಡೆಯುತ್ತಿದ್ದರು. ಟಿವಿಎಸ್ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಇಂದು ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್ ಸವಾರ ಶಿವಕುಮಾರ್ ಕೂಡ ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮೃತ ವಾರಾಸುದಾರರಿಗೆ ನೀಡಿದರು.
Next Story





