Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣ್ಣಪಳ್ಳ ಅಭಿವೃದ್ಧಿಗೆ 1.74 ಕೋಟಿ ರೂ....

ಮಣ್ಣಪಳ್ಳ ಅಭಿವೃದ್ಧಿಗೆ 1.74 ಕೋಟಿ ರೂ. ವೆಚ್ಚ: ಸಚಿವ ಪ್ರಮೋದ್

ರಾಷ್ಟ್ರೀಯ ಶಿಲ್ಪಕಲಾ ಶಿಬಿರ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ16 Dec 2017 7:02 PM IST
share
ಮಣ್ಣಪಳ್ಳ ಅಭಿವೃದ್ಧಿಗೆ 1.74 ಕೋಟಿ ರೂ. ವೆಚ್ಚ: ಸಚಿವ ಪ್ರಮೋದ್

ಉಡುಪಿ, ಡಿ.16: ಮಣಿಪಾಲದಲ್ಲಿರುವ ಮಣ್ಣಪಳ್ಳ ಕೆರೆ ಪರಿಸರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಇದುವರೆಗೆ 1.74 ಕೋಟಿ ರೂ. ಗಳನ್ನು ವ್ಯಯಿಸಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಡಿ.29ರಿಂದ 31ರವರೆಗೆ ನಡೆಯಲಿರುವ ಉಡುಪಿ ಪರ್ಬದ ಪ್ರಯುಕ್ತ, ಜಿಲ್ಲಾ ಆಡಳಿತ, ಪ್ರವಾಸೋದ್ಯಮ ಇಲಾಖೆ, ಮಣ್ಣಪಳ್ಳ ಅಭಿವೃದ್ದಿ ಸಮಿತಿ ಮತ್ತು ಉಡುಪಿ ನಿರ್ಮಿತಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಮಣ್ಣಪಳ್ಳದ ರೋಟರಿ ಸಬಾಭವನದಲ್ಲಿ ಒಂದು ವಾರ ಕಾಲ ಆಯೋಜಿಸಿರುವ ರಾಷ್ಟ್ರಮಟ್ಟದ ಶಿಲ್ಪಕಲಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ಪರ್ಬದ ಪ್ರಯುಕ್ತ ನಡೆದಿರುವ ಪ್ರಥಮ ಕಾರ್ಯಕ್ರಮ ಇದಾಗಿದ್ದು, ಈ ಶಿಲ್ಪಕಲಾ ಶಿಬಿರದಲ್ಲಿ ದೇಶದ ವಿವಿಧ ರಾಜ್ಯಗಳ ಹೆಸರಾಂತ ಶಿಲ್ಪಿಗಳು ಬಾಗವಹಿಸುತ್ತಿದ್ದು, ತಮ್ಮ ಕಲಾ ಪ್ರೌಢಿಮೆ ಮೂಲಕ, ಇಲ್ಲಿ ಆಕರ್ಷಕ ಶಿಲ್ಪಗಳನ್ನು ನಿರ್ಮಿಸಲಿದ್ದಾರೆ. ಇವರೆಲ್ಲರೂ ತಾವು ರಚಿಸುವ ಶಿಲ್ಪಗಳನ್ನು ಇಲ್ಲಿಯೇ ಉಳಿಸುವುದರಿಂದ ಈ ಆಕರ್ಷಕ ಶಿಲ್ಪಗಳಿಂದ ಮಣ್ಣಪಳ್ಳದ ಸೌಂದರ್ಯ ಇನ್ನಷ್ಟು ಹೆಚ್ಚಾಗಲಿದೆ. ಇದು ಸಹ ಪ್ರವಾಸಿಗರಿಗೆ ಆಕರ್ಷಣೀಯ ಕೇಂದ್ರವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಮಾತನಾಡಿ, ಈ ಶಿಲ್ಪಕಲಾ ಶಿಬಿರದಲ್ಲಿ ಹೆಸರಾಂತ ಶಿಲ್ಪಿಗಳ ಜೊತೆಗೆ ಸ್ಥಳೀಯ ಪ್ರತಿಭೆಗಳಿಗೂ ಸಹ ಭಾಗವಹಿಸಲು ಅವಕಾಶ ನೀಡಿ, ಅವರನ್ನು ಪ್ರೋತ್ಸಾಹಿಸುವಂತೆ ಸಲಹೆ ನೀಡಿದರು.

 ಕಾರ್ಯಕ್ರಮದಲ್ಲಿ, ಉಡುಪಿ ತಾಪಂ ಅಧ್ಯಕ್ಷೆ ನಳನಿ ಪ್ರದೀಪ್ ರಾವ್, ಶಿಲ್ಪ ಕಲಾ ಶಿಬಿರದ ಸಂಯೋಜಕ ಪುರುಷೋತ್ತಮ ಆಡ್ವೆ, ಕಲಾವಿದ ಹಾಗೂ ಸಂಪನ್ಮೂಲ ವ್ಯಕ್ತಿ ಬೆಂಗಳೂರಿನ ರವಿಕುಮಾರ್ ಕಾಶಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ಅನಿತಾ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ಜನಾರ್ಧನ್ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಮೈಸೂರು, ಚೆನ್ನೈ, ಕೇರಳ. ಬರೋಡ, ಬೆಂಗಳೂರುಗಳಂಥ ದೂರದ ಊರುಗಳಿಂದ ಆಗಮಿಸಿರುವ ಹತ್ತಕ್ಕೂ ಅಧಿಕ ಶಿಲ್ಪಕಲಾವಿದರು 8 ದಿನಗಳ ಈ ಶಿಬಿರದಲ್ಲಿ ಭಾಗವಹಿಸುತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X