Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಡಿನ ಜನರ ಸೇವೆಗೆ ನನ್ನ ಜೀವನ ಮುಡಿಪು :...

ನಾಡಿನ ಜನರ ಸೇವೆಗೆ ನನ್ನ ಜೀವನ ಮುಡಿಪು : ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ16 Dec 2017 7:25 PM IST
share
ನಾಡಿನ ಜನರ ಸೇವೆಗೆ ನನ್ನ ಜೀವನ ಮುಡಿಪು : ಕುಮಾರಸ್ವಾಮಿ

ಬೆಂಗಳೂರು, ಡಿ. 16: ಹೃದಯ ಶಸ್ತ್ರಚಿಕಿತ್ಸೆ ಬಳಿಕ ನನಗೆ ಪುನರ್ಜನ್ಮ ದೊರೆತಿದ್ದು, ಇದನ್ನು ನಾಡಿನ ಜನರ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ.

ಶನಿವಾರ ತನ್ನ 59ನೆ ಹುಟ್ಟುಹಬ್ಬದ ಅಂಗವಾಗಿ ನಗರದ ವಿವಿಧ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನ ಜನರ ಆಶೋತ್ತರಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳನ್ನು ನಿವಾರಿಸಿ, ಉತ್ತಮ ಆಡಳಿತ ನೀಡಲು ತಮ್ಮ ಜೀವನವನ್ನು ಮೀಸಲಿಡುವೆ ಎಂದರು.

ಜನರ ಕಲ್ಯಾಣಕ್ಕಾಗಿ ನಾವು ಸದಾ ಕಂಕಣಬದ್ದರಾಗಿ ಕೆಲಸ ಮಾಡುತ್ತೇವೆ. ಜನರ ಪ್ರೀತಿ ವಿಶ್ವಾಸಕ್ಕೆ ನಾವು ಚಿರಋಣಿ. ಜೆಡಿಎಸ್ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಜನರಿಗೆ ಎಲ್ಲಾ ಭರವಸೆಗಳನ್ನು ಈಡೇರಿಸಲು ಸಾಧ್ಯ. ಮುಂದಿನ ಚುನಾವಣೆಯಲ್ಲಿ ಬೆಂ.ನಗರದ 28 ಕ್ಷೇತ್ರಗಳ ಪೈಕಿ ಕನಿಷ್ಠ 15 ಕ್ಷೇತ್ರಗಳಲ್ಲಾದರೂ ಪಕ್ಷವನ್ನು ಗೆಲ್ಲಿಸಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವಂತೆ ಮಾಡಬೇಕು ಎಂದರು.

ಸಮ್ಮಿಶ್ರ ಸರಕಾರದಿಂದ ಸಂಪನ್ಮೂಲ ಕ್ರೋಡೀಕರಣ ಹಾಗೂ ಜನಪರ ಕೆಲಸ ಮಾಡಲು ಸ್ವಾತಂತ್ರ್ಯವಿರುವುದಿಲ್ಲ. ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದರೆ ಜನರಿಗಾಗಿ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಶಿಕ್ಷಣ ಸೇರಿದಂತೆ ಆರೋಗ್ಯ ಇನ್ನಿತರ ಕ್ಷೇತ್ರಗಳಲ್ಲಿ ಸೂಕ್ತ ನಿರ್ಧಾರ ಕೈಗೊಂಡು ಜನರಿಗೆ ಅನುಕೂಲ ಕಲ್ಪಿಸಬೇಕಿದೆ. ಈ ನಿಟ್ಟಿನಲ್ಲಿ ನಾವು ಜನರ ಒಳಿತನ್ನೇ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತೇವೆ. ನಿಮ್ಮ ಎಲ್ಲ ಸಮಸ್ಯೆ ನೀಗಿಸುತ್ತೇವೆ. ಯುವಜನರಿಗೆ ಉದ್ಯೋಗ, ವೃದ್ಧಾಪ್ಯ-ವಿಧವಾ ವೇತನ ಸೇರಿದಂತೆ ಅವಶ್ಯಕತೆಗಳನ್ನು ಪೂರೈಸಲು ಕಾರ್ಯೋನ್ಮುಖರಾಗುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X