ಮುಂಡಗೋಡ ವಲಯ ಅರಣ್ಯಾಧಿಕಾರಿಗೆ ಮಾತೃ ವಿಯೋಗ

ಮುಂಡಗೋಡ, ಡಿ. 16: ಮುಂಡಗೋಡ ವಲಯದ ಅರಣ್ಯಾಧಿಕಾರಿ ಸುರೇಶ ಕುಳ್ಳೋಳ್ಳಿಯವರ ತಾಯಿ ಸಾವಿತ್ರಿ ಬಾಯಿ ಅರ್ಜುನ ಕುಲ್ಲೋಳ್ಳಿ (60) ಅನಾರೋಗ್ಯದಿಂದ ಮುಂಡಗೋಡನಲ್ಲಿ ನಿಧನರಾದರು.
ಮೃತರು ಇಬ್ಬರು ಪುತ್ರರು ಹಾಗೂ ಐದು ಮಂದಿ ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆಯಿತು.
ಶಾಸಕ ಶಿವರಾಮ ಹೆಬ್ಬಾರ, ಮಾಜಿ ಶಾಸಕ ವಿ.ಎಸ್.ಪಾಟೀಲ, ಬ್ಲಾಕ್ ಅಧ್ಯಕ್ಷ ರವಿಗೌಡಾ ಪಾಟೀಲ, ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಟಿ.ಪಾಟೀಲ, ಪ.ಪಂ. ಅಧ್ಯಕ್ಷ ಮಹಮ್ಮದ್ ರಫೀಕ್ ಇನಾಮದಾರ, ಫಕ್ರುದ್ದೀನ್ (ಬಾಬಾ) ಬೆಂಡಿಗೇರಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
Next Story





