ಬರಖ ಶಾಲೆಯಲ್ಲಿ ಅಂತರ್ ಶಾಲಾ ಮಟ್ಟದ ಕುರ್‌ಆನ್ ಸ್ಪರ್ಧೆ:ವಿಜೇತರಿಗೆ ಬಹುಮಾನ ವಿತರಣೆ

ಮಂಗಳೂರು, ಡಿ. 16: ಬರಖ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಂತರ್ ಶಾಲಾ ಮಟ್ಟದ ಕುರ್‌ಆನ್ ಪಾರಾಯಣ ಸ್ಪರ್ಧೆ ಬರಖ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶನಿವಾರ ನಡೆಯಿತು.
ಕಾರ್ಯಕ್ರಮದಲ್ಲಿ ಸುಮಾರು 12 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬರಖ ಇಂಟರ್‌ನ್ಯಾಷನಲ್ ಸ್ಕೂಲ್‌ನ ಅರೇಬಿಕ್ ವಿಭಾಗದ ಎಚ್‌ಒಡಿ ಫುಝೈಲ್ ಅವರು ಕುರಆನ್ ಅವತೀರ್ಣದ ಉದ್ದೇಶವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಹಮ್ಮದ್ ಅಶ್ರಫ್ ಉಪಸ್ಥಿತರಿದ್ದರು.
ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಮಾಣ ಪತ್ರದ ನೀಡಿ ಪುರಸ್ಕರಿಸಲಾಯಿತು. ಸಂಸ್ಥೆಯ ಟ್ರಸ್ಟಿ ಹಾಗೂ ಇತರ ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.
Next Story





