ಎತ್ತಿನಗಾಡಿಗೆ ಕಾರು ಢಿಕ್ಕಿ:ಎತ್ತು ಸಾವು

ಮಂಡ್ಯ, ಡಿ.16: ಎತ್ತಿನಗಾಡಿಗೆ ಕಾರು ಢಿಕ್ಕಿ ಹೊಡೆದು ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಂದು ಎತ್ತು ಮತ್ತು ರೈತ ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಮೈಸೂರು ಹೆದ್ದಾರಿಯ ತಾಲೂಕಿನ ಇಂಡುವಾಳು ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.
ತಾಲೂಕಿನ ಯಲಿಯೂರು ಗ್ರಾಮದ ಮನು ಜಮೀನಿಗೆ ಗೊಬ್ಬರ ಹಾಕಿ ಗ್ರಾಮಕ್ಕೆ ವಾಪಸ್ ತೆರಳುತಿದ್ದಾಗ ಹಿಂದಿನಿಂದ ಬಂದು ಕಾರು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಒಂದು ಎತ್ತು ಸ್ಥಳದಲ್ಲೇ ಸಾವನ್ನಪ್ಪಿದರೆ, ತೀವ್ರವಾಗಿ ಗಾಯಗೊಂಡ ಮತ್ತೊಂದು ಎತ್ತು, ರೈತ ಮನುವನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸೇರಿಸಿದರು.ಕಾರಿನಲ್ಲಿದ್ದ ಮೂವರು ಸ್ಥಳದಿಂದ ಪರಾರಿಯಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





