ಡಿ.19ಕ್ಕೆ ಬೋರ್ಡ್ ಹೈಸ್ಕೂಲ್‌ನಲ್ಲಿ ರಸಪ್ರಶ್ನೆ
ಉಡುಪಿ, ಡಿ.16: ಮತದಾರರ ಜಾಗೃತಿಯನ್ನು ಯುವ ಮನಸ್ಸುಗಳಲ್ಲಿ ಮೂಡಿಸುವ ಸಂಬಂಧ ಡಿ.19ರ ಮಂಗಳವಾರ ಬೋರ್ಡ್ ಹೈಸ್ಕೂಲ್‌ನಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಆಸಕ್ತ 14ರಿಂದ 18ರ ಹರೆಯದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಅದೇ ದಿನ ಬೆಳಗ್ಗೆ ಸ್ಥಳದಲ್ಲಿಯೇ ನೋಂದಾಯಿಸಿಕೊಳ್ಳಲು ಅವಕಾಶವಿದೆ.
ಜಿಲ್ಲಾ ಮಟ್ಟದ ಸ್ಪರ್ಧಾ ವಿಜೇತರಿಗೆ ನಗದು ಬಹುಮಾನವಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಸರ್ಟಿಫಿಕೇಟ್ ನೀಡಲಾಗುವುದು. ಈ ಸಂಬಂಧ ಹೆಚ್ಚಿನ ಮಾಹಿತಿಗೆ ಮೊಬೈಲ್ ನಂ.:9448547870ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





