ಜಿಲ್ಲಾ ಬಾಲಭವನದಲ್ಲಿ ಸೃಜನಾತ್ಮಕ ಚಟುವಟಿಕೆ
ಉಡುಪಿ, ಡಿ.16: ಬನ್ನಂಜೆಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಮುಂದಿನ ಜನವರಿ ತಿಂಗಳಿನಿಂದ ಪ್ರತೀ ಶನಿವಾರ ಸಂಜೆ ಹಾಗೂ ಭಾನುವಾರ ಬೆಳಗ್ಗೆ ಮತ್ತು ಸಂಜೆ 6 ವರ್ಷದಿಂದ 16 ವರ್ಷದೊಳಗಿನ ಮಕ್ಕಳಿಗೆ ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಳನ್ನು ಹಮ್ಮಿಕೊಳ್ಳಲಾಗುವುದು.
ಆಸಕ್ತ ಮಕ್ಕಳಿಗೆ ಚಿತ್ರಕಲೆ, ಕರಕುಶಲ, ರಂಗಚಟುವಟಿಕೆ, ಸಮೂಹನೃತ್ಯ, ಸಂಗೀತ, ಯೋಗ ಚಟುವಟಿಕೆಗಳನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸೌಲ್ಯ ವಂಚಿತ ಹಾಗೂ ಸರಕಾರಿ ಶಾಲಾ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2521942ನ್ನು ಸಂಪರ್ಕಿಸುವಂತೆ ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story





