ಭಟ್ಕಳ: 'ಯುನಿವರ್ಸಿಟಿ ಬ್ಲೂ' ಆಗಿ ಆಯ್ಕೆಗೊಂಡ ಅಂಜುಮನ್ ಕಾಲೇಜ್ ವಿದ್ಯಾರ್ಥಿಗಳು

ಭಟ್ಕಳ, ಡಿ. 16: ಇಲ್ಲಿನ ಪ್ರತಿಷ್ಠಿತ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮನ್ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಕಂಪ್ಯೂಟರ್ ಅಪ್ಲಿಕೇಶನ್ (ಬಿಬಿಎ ಮತ್ತು ಬಿಸಿಎ) ಕಾಲೇಜ್ ನ ಇಬ್ಬರು ವಿದ್ಯಾರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇದರ ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗುವುದರ ಮೂಲಕ 'ಯುನಿವರ್ಸಿಟಿ ಬ್ಲೂ' ಗೌರವಕ್ಕೆ ಪಾತ್ರರಾಗಿದ್ದಾರೆ.
ಮುಹಮ್ಮದ್ ಅಖಿಯಾರ್ ಮತ್ತು ಮುಹಮ್ಮದ್ ಆಲಂ ಕರ್ನಾಟಕ ವಿ.ವಿ. ಬ್ಲೂ ಆಗಿ ನೇಮಕಗೊಂಡಿದ್ದು ಡಿ.21 ರಿಂದ 29 ರ ವರೆಗೆ ಕೇರಳದ ಕ್ಯಾಲಿಕಟ್ ನಲ್ಲಿ ಜರಗುವ ಅಂತರ್ ವಿಶ್ವವಿದ್ಯಾಲಯ ಫುಟ್ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ತಂಡದಲ್ಲಿ ಸ್ಥಾನಪಡೆದುಕೊಂಡಿದ್ದು, ಕರ್ನಾಟಕದ ಪರವಾಗಿ ಆಡಲಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆಯೂ ಅಂಜುಮನ್ ಮಹಾವಿದ್ಯಾಲಯದ 2 ವಿದ್ಯಾರ್ಥಿಗಳು ಕೂಡ ಕರ್ನಾಟಕ ವಿಶ್ವವಿದ್ಯಾಲಯ ಬ್ಲೂ ಆಗಿ ನೇಮಕಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಜುಕಾಕೋ ಅಬ್ದುಲ್ ರಹೀಮ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಹಾಖ್ ಶಾಬಂದ್ರಿ, ಕಾಲೇಜ್ ಬೋರ್ಡ್ ಕಾರ್ಯದರ್ಶಿ ಆಫ್ತಾಬ್ ಖಮರಿ, ಪ್ರಾಂಶುಪಾಲ ಮುಹಮ್ಮದ್ ಮುಹ್ಸಿನ್ ಹಾಗೂ ಉಪನ್ಯಾಸಕ ವರ್ಗ ಅಭಿನಂದನೆ ಸಲ್ಲಿಸಿದೆ.





