ಜೆಡಿಎಸ್‍ನಿಂದ ಎಚ್‍ಡಿಕೆ ಹುಟ್ಟುಹಬ್ಬ ಆಚರಣೆ

ಮಂಡ್ಯ, ಡಿ.16: ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಶನಿವಾರ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ 59ನೆ ಹುಟ್ಟುಹಬ್ಬ ಆಚರಿಸಿದರು.
ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಜಿ.ಬಿ.ಶಿವಕುಮಾರ್, ಇತರರು ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.
ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೇಶ್, ಸದಸ್ಯ ಚಂದಗಾಲು ಶಿವಣ್ಣ, ನಗರಸಭಾ ಸದಸ್ಯ ಮಹೇಶ್‍ಕೃಷ್ಣ, ಮಾಜಿ ಅಧ್ಯಕ್ಷೆ ಅಂಬುಜಮ್ಮ, ಜೆಡಿಎಸ್ ನಗರಾಧ್ಯಕ್ಷ ಗೌರೀಶ್, ತಾಲೂಕು ಅಧ್ಯಕ್ಷ ಎಂ.ಜಿ.ತಿಮ್ಮೇಗೌಡ, ಎಂ.ಬಿ.ಶ್ರೀನಿವಾಸ್, ರವಿ, ಇತರ ಮುಖಂಡರು ಹಾಜರಿದ್ದರು.
Next Story





