Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ; ವೇತನ ಪಾವತಿಯಾಗದಿದ್ದಲ್ಲಿ...

ಮಡಿಕೇರಿ; ವೇತನ ಪಾವತಿಯಾಗದಿದ್ದಲ್ಲಿ ಉಪವಾಸ ಸತ್ಯಾಗ್ರಹ : ದಿನಗೂಲಿ ನೌಕರರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ17 Dec 2017 7:32 PM IST
share
ಮಡಿಕೇರಿ; ವೇತನ ಪಾವತಿಯಾಗದಿದ್ದಲ್ಲಿ ಉಪವಾಸ ಸತ್ಯಾಗ್ರಹ : ದಿನಗೂಲಿ ನೌಕರರ ಎಚ್ಚರಿಕೆ

ಮಡಿಕೇರಿ, ಡಿ.17 :ಜಿಲ್ಲಾ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ದಿನಗೂಲಿ ನೌಕರರಿಗೆ ಗುತ್ತಿಗೆದಾರ ಸಂಸ್ಥೆಯಿಂದ ನಿಯಮನುಸಾರ ವೇತನ ಪಾವತಿಯಾಗುತ್ತಿಲ್ಲವೆಂದು ಆರೋಪಿಸಿರುವ ನಗರದ ಜಿಲ್ಲಾ ಆಸ್ಪತ್ರೆಯ ನೌಕರರು ಡಿ.18 ರೊಳಗೆ ಬಾಕಿ ವೇತನ ನೀಡದೆ ಇದ್ದಲ್ಲಿ ಡಿ.19 ರಿಂದ ಕೆಲಸ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ನೌಕರರು ಎಚ್ಚರಿಕೆ ನೀಡಿದ್ದಾರೆ.

ದಿನಗೂಲಿ ನೌಕರರಿಗೆ ಕಳೆದ ಕೆಲವು ತಿಂಗಳುಗಳಿಂದ ಕ್ರಮಬದ್ಧವಾಗಿ ವೇತನ ಪಾವತಿಯಾಗಿಲ್ಲ, ಪಿ.ಎಫ್ ಬಗ್ಗೆ ಮಾಹಿತಿ ನೀಡುತ್ತಿಲ್ಲ. ನಮ್ಮ ದುಡಿಮೆಗೆ ಬೆಲೆಯೇ ಇಲ್ಲದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ನೌಕರರು ಕಳೆದೆರೆಡು ದಿನಗಳ ಹಿಂದೆ ವೇತನಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಸಂದರ್ಭ ಡಿ.16 ರಂದು ಬಾಕಿ ವೇತನ ಪಾವತಿಸುವುದಾಗಿ ಗುತ್ತಿಗೆದಾರ ಸಂಸ್ಥೆ ಭರವಸೆ ನೀಡಿತ್ತು. ಆದರೆ ಕೆಲವರಿಗೆ ಮಾತ್ರ ಚೆಕ್ ನೀಡಲಾಗಿದೆ ಎಂದು ಆರೋಪಿಸಿದರು.

ನೌಕರರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಜೆಡಿಎಸ್ ಜಿಲ್ಲಾ ವಕ್ತಾರ ಪಿ.ಎಸ್.ಭರತ್‍ ಕುಮಾರ್ ಸ್ಥಳದಲ್ಲಿ ಹಾಜರಿದ್ದು, ಗುತ್ತಿಗೆದಾರ ಸಂಸ್ಥೆಯ ಪ್ರತಿನಿಧಿಯನ್ನು ತರಾಟೆಗೆ ತೆಗೆದುಕೊಂಡರು. ಸುಮಾರು 70 ಮಂದಿ "ಡಿ" ಗ್ರೂಪ್ ನೌಕರರಿಗೆ ಮಾತ್ರ ಬಾಕಿ ವೇತನ ನೀಡಲಾಗಿದೆ. ಸಫಾಯಿ ಕರ್ಮಚಾರಿ, ಅಡುಗೆಯವರು, ಲ್ಯಾಬ್ ಟೆಕ್ನಿಷೀಯನ್, ಸೆಕ್ಯುರಿಟಿ ಗಾರ್ಡ್‍ಗಳಿಗೆ ಇನ್ನೂ ಕೂಡ ವೇತನ ನೀಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. 

ಗುತ್ತಿಗೆದಾರ ಸಂಸ್ಥೆ ಬಡ ನೌಕರರಿಂದ ಕಾನೂನಿಗೆ ವಿರುದ್ಧವಾಗಿ ಭದ್ರತಾ ಠೇವಣಿ ಸಂಗ್ರಹಿಸಿದ್ದು, ಇದನ್ನು ತಕ್ಷಣ ಮರಳಿಸಬೇಕೆಂದು ಭರತ್ ಕುಮಾರ್ ಒತ್ತಾಯಿಸಿದರು.

ಬಾಕಿ ಉಳಿದ ನೌಕರರಿಗೆ ಡಿ.18 ರಂದು ವೇತನ ನೀಡುವುದಾಗಿ ಗುತ್ತಿಗೆದಾರ ಸಂಸ್ಥೆಯ ಪ್ರತಿನಿಧಿ ಭರವಸೆ ನೀಡಿದ್ದಾರೆ ಎಂದು ತಿಳಿಸಿರುವ ಅವರು ಭರವಸೆ ಈಡೇರದಿದ್ದರೆ ನೌಕರರು ಕೆಲಸ ಸ್ಥಗಿತಗೊಳಿಸಲಿದ್ದಾರೆ ಎಂದರು.

ಇನ್ನೂರಕ್ಕೂ ಅಧಿಕ ಮಂದಿ ನೌಕರರು ದುಡಿಯುತ್ತಿದ್ದಾರೆ. ವೇತನ ಪಾವತಿಯಲ್ಲೂ ತಾರತಮ್ಯ ತೋರಲಾಗುತ್ತಿದೆ. ಕಾರ್ಮಿಕ ಇಲಾಖೆ ನಿಯಮನುಸಾರ 11 ಸಾವಿರ ರೂ.ವೇತನ ಸಿಗಬೇಕು, ಆದರೆ ಗುತ್ತಿಗೆದಾರ ಸಂಸ್ಥೆ ಕೇವಲ 6 ಸಾವಿರ ರೂ. ಮಾತ್ರ ಪಾವತಿಸುತ್ತಿದೆ ಎಂದು ಭರತ್ ಕುಮಾರ್ ಆರೋಪಿಸಿದರು.

ಸಕಾಲದಲ್ಲಿ ವೇತನ ಪಾವತಿಯಾಗದೆ ಇರುವುದರಿಂದ ಬಡಕುಟುಂಬಗಳು ಮನೆ ಬಾಡಿಗೆ ಕಟ್ಟಲಾಗದೆ ಮತ್ತು ನಿತ್ಯ ಬಳಕೆಯ ವಸ್ತುಗಳನ್ನು ಖರೀದಿಸಲಾಗದೆ ಪರಿತಪ್ಪಿಸುತ್ತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಸುಮಾರು 70 ನೌಕರರಿಗೆ ನೀಡಲಾಗಿರುವ ಚೆಕ್‍ನ್ನು ಇದೇ ಸಂದರ್ಭ ವಿತರಿಸಲಾಯಿತು. ಆಸ್ಪತ್ರೆಯ ಅಧಿಕಾರಿಗಳು ಹಾಗೂ ದಿನಗೂಲಿ ನೌಕರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X