ಬೈಂದೂರು: ಲಾರಿಗಳ ಮಧ್ಯೆ ಅಪಘಾತ; ಚಾಲಕ ಮೃತ್ಯು

ಬೈಂದೂರು,ಡಿ.17: ಎರಡು ಲಾರಿಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಓರ್ವ ಲಾರಿ ಚಾಲಕ ಮೃತಪಟ್ಟ ಘಟನೆ ಬೈಂದೂರು ಸಮೀಪದ ಒತ್ತಿನೆಣೆ ಎಂಬಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.
ಹನೀಫ್ (55) ಮೃತಪಟ್ಟ ಚಾಲಕ ಎಂದು ಗುರುತಿಸಲಾಗಿದೆ. ಭಾರತ್ ಅಟೋ ವರ್ಕ್ಸ್ ನ ಲಾರಿಯಲ್ಲಿ ಡಿಸೇಲ್ ಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಚಾಲಕ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿ ವಿಶ್ರಾಂತಿ ತೆಗೆಯುತ್ತಿದ್ದು, ಈ ವೇಳೆ ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪೇಪರ್ ತುಂಬಿದ ಲಾರಿಯು ಸ್ಟೇರಿಂಗ್ ತುಂಡಾಗಿ ರಸ್ತೆ ಬದಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಭಾರತ್ ಅಟೋ ವರ್ಕ್ಸ್ ಲಾರಿಯಲ್ಲಿದ್ದ ಹನೀಫ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





