ಡಿವೈಡರ್‌ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು
ಮಣಿಪಾಲ, ಡಿ.17: ನಾಯಿ ಅಡ್ಡ ಬಂದ ಪರಿಣಾಮ ಬೈಕೊಂದು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಉಡುಪಿ ಮಣಿಪಾಲ ರಸ್ತೆಯ ಲಕ್ಷ್ಮೀಂದ್ರ ನಗರದ ಕೆಎಫ್‌ಸಿ ಎದುರು ಡಿ.17ರಂದು ಬೆಳಗಿನ ಜಾವ 3.30ರ ಸುಮಾರಿಗೆ ನಡೆದಿದೆ.
ಮೃತರನ್ನು ಉಡುಪಿ ಬೈಲೂರು ಮಹಿಷಮರ್ದಿನಿ ದೇವಸ್ಥಾನ ಬಳಿಯ ನಿವಾಸಿ ಸುನಿತಾ ಐಮನ್ ಎಂಬವರ ಮಗ ರೋಹನ್ ಐಮನ್(29) ಎಂದು ಗುರುತಿಸಲಾಗಿದೆ.
ಇವರು ಮಣಿಪಾಲದಿಂದ ವಾಪಸ್ಸು ಮನೆಗೆ ಬೈಕಿನಲ್ಲಿ ಹೋಗುತ್ತಿದ್ದಾಗ ರಸ್ತೆಯಲ್ಲಿ ನಾಯಿ ಅಡ್ಡ ಬಂದ ಪರಿಣಾಮ ಒಮ್ಮೆಲೆ ಬ್ರೇಕ್ ಹಾಕಿದರೆನ್ನಲಾಗಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆಯಿತು.
ಅಪಘಾತದಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ರೋಹನ್ ಸ್ಥಳದಲ್ಲೇ ಮೃತಪಟ್ಟರು. ವಿದೇಶದಲ್ಲಿ ದುಡಿಯುತ್ತಿದ್ದ ರೋಹನ್ ಇತ್ತೀಚೆಗಷ್ಟೆ ರಜೆಯಲ್ಲಿ ಊರಿಗೆ ಬಂದಿದ್ದರೆಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





