ದ್ವಿಚಕ್ರವಾಹನ ವಿತರಣೆ
ಉಡುಪಿ, ಡಿ.18: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಇದರ ವತಿಯಿಂದ ಉಡುಪಿ ಆಶಾನಿಲಯ ವಿಶೇಷ ಮಕ್ಕಳ ಶಾಲೆಯಲ್ಲಿ ಡಿ.19 ರಂದು ಅಪರಾಹ್ನ 2:30ಕ್ಕೆ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಮೀನುಗಾರಿಕೆ, ಯುವಜನ ಸಬಲೀಕರಣ, ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ದ್ವಿಚಕ್ರವಾಹನ ವಿತರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





