ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿನ ಟ್ಯಾಂಕ್ಗೆ ಬಿದ್ದು ಸಾವು

ಸಾಂದರ್ಭಿಕ ಚಿತ್ರ
ಹೊಸದಿಲ್ಲಿ, ಡಿ.18: ಸೆಲ್ಫಿ ತೆಗೆಯಲು ಪ್ರಯತ್ನಿಸುತ್ತಿದ್ದ ವೇಳೆ ನೀರಿನ ಟ್ಯಾಂಕ್ಗೆ ಬಿದ್ದು ಇಬ್ಬರು ಯುವಕರು ಮೃತಪಟ್ಟ ಘಟನೆ ದೇಶದ ರಾಜಧಾನಿ ದಿಲ್ಲಿಯಲ್ಲಿ ರವಿವಾರ ಸಂಭವಿಸಿದೆ.
ವರದಿಗಳ ಪ್ರಕಾರ ಶೋಸಿತ್ ಸಿಂಗ್ ಮತ್ತು ರಿಷಭ್ ಶರ್ಮಾ ಸೈನಿಕ ವಿಹಾರದ ಬಳಿಯಿರುವ ನೀರಿನ ಟ್ಯಾಕ್ ಮೇಲೇರಿ ಸೆಲ್ಫಿ ತೆಗೆಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಕಾಲುಜಾರಿ ಅವರು ಟ್ಯಾಂಕ್ ಒಳಗೆ ಬಿದ್ದಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾದರೂ ಅವರ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ತಿಂಗಳು ಒರಿಸ್ಸಾದ ಯುವತಿಯೊಬ್ಬಳು ಬೊಕರೊ ಸ್ಟೀಲ್ ಕಂಪೆನಿಯ ಶೈತ್ಯೀಕರಣ ಬಾವಿಯ ಬಳಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಅದರೊಳಗೆ ಬಿದ್ದು ಮೃತಪಟ್ಟಿದ್ದಳು.
Next Story





