ಹನೂರು : ಬೀದಿ ಬದಿ ವ್ಯಾಪಾರಸ್ಥರಿಂದ ಧರಣಿ

ಹನೂರು,ಡಿ.20: ಮಲೈಮಹದೇಶ್ವರ ಬೆಟ್ಟದಲ್ಲಿ ರಸ್ತೆ ಬದಿ ಅಂಗಡಿ ಮಳಿಗೆಯನ್ನು ತೆರವುಗೊಳಿಸುವುದರನ್ನು ಖಂಡಿಸಿ ಮತ್ತು ಅದನ್ನು ಪುನರ್ ನಿರ್ಮಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಬೀದಿ ಬದಿ ವ್ಯಾಪಾರಿಗಳಿಂದ ಧರಣಿ ನಡೆಯಿತು.
ಮಹದೇಶ್ವರ ಬೆಟ್ಟದ ಪ್ರಾಧಿಕಾರದ ವತಿಯಿಂದ ಕಳೆದ 2 ತಿಂಗಳ ಹಿಂದೆ ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು, ಬೀದಿ ಬದಿ ವ್ಯಾಪಾರಸ್ಥರಿಗೆ ಮತ್ತೆ ಅವಕಾಶ ಕಲ್ಪಿಸಿಕೊಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಬೀದಿ ಬದಿ ವ್ಯಾಪಾರಿಗಳ ನೇತೃತ್ವ ವಹಿಸಿ ಮಾತನಾಡಿದ ರಸ್ತೆ ಬದಿ ವ್ಯಾಪಾರಸ್ಥರ ಸಂಘದ ಮೈಸೂರು ನಗರದ ಅಧ್ಯಕ್ಷ ಬಸವರಾಜ್ ಮಾತನಾಡಿ, ಪ್ರಾಧಿಕಾರದ ಅಧಿಕಾರಿಗಳು ಆಂಗಡಿಗಳನ್ನು ಏಕಾಏಕಿ ತೆರವುಗೊಳಿಸಿರುವುದರಿಂದ 400 ಕ್ಕೂ ಹೆಚ್ಚು ವ್ಯಾಪಾರಿಗಳು ಇಂದು ತೊಂದರೆ ಅನುಭವಿಸುವಂತಾಗಿದೆ ಎಂದು ಆರೋಪಿಸಿದರು.
ಸ್ಥಳಕ್ಕೆ ತಹಶೀಲ್ದಾರ್ ಭೇಟಿ : ಹನೂರು ಪಟ್ಟಣದ ಹೆಚ್ಚುವರಿ ತಹಶೀಲ್ದಾರ್ ಮಹದೇವಸ್ವಾಮಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ನಿಮ್ಮ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ನೀಡಿದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗುವುದು ಎಂದರು.
ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಪ್ರಾಧಿಕಾರದ ಕಾರ್ಯದರ್ಶಿ ಬಂದು ನಮ್ಮ ಮನವಿಯನ್ನು ಸ್ವೀಕರಿಸಿ ನಂತರ ಪುಟ್‍ಬಾತ್ ಮೇಲೆ ವ್ಯಾಪಾರಿಕರಣಕ್ಕೆ ಅನುವು ಮಾಡಿಕೊಡುವವೆರಗೂ ಪ್ರತಿಭಟಯನ್ನು ಕೈಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನೆಯಲ್ಲಿ 400ಕ್ಕೂ ಹೆಚ್ಚು ಬೀದಿ ವ್ಯಾಪಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೂಂಡಿದ್ದರು,







