Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಲೇಜ್ ಕ್ಯಾಂಪಸ್‌ನಲ್ಲೇ ವೈದ್ಯಕೀಯ...

ಕಾಲೇಜ್ ಕ್ಯಾಂಪಸ್‌ನಲ್ಲೇ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪ

ವಾರ್ತಾಭಾರತಿವಾರ್ತಾಭಾರತಿ20 Dec 2017 6:36 PM IST
share
ಕಾಲೇಜ್ ಕ್ಯಾಂಪಸ್‌ನಲ್ಲೇ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪ

ಭುವನೇಶ್ವರ್, ಡಿ.20: ಇಲ್ಲಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಂಚೇಶ್ವರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ವಿದ್ಯಾರ್ಥಿನಿ, ಮಂಗಳವಾರ ರಾತ್ರಿ ತಾನು ವಸತಿ ನಿಲಯಕ್ಕೆ ಮರಳುತ್ತಿದ್ದ ವೇಳೆ ಕಾಲೇಜಿನ ಪಿಯೋನ್ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದಾಳೆ.

ವಿದ್ಯಾರ್ಥಿನಿ ನೀಡಿದ ದೂರಿನ ಆಧಾರದಲ್ಲಿ ನಾವು ಆರೋಪಿಯನ್ನು ಬಂಧಿಸಿದ್ದೇವೆ. ಸದ್ಯ ಆರೋಪಿ ಮತ್ತು ಸಂತ್ರಸ್ತ ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭುವನೇಶ್ವರದ ಸಹಾಯಕ ಪೊಲೀಸ್ ಆಯುಕ್ತರಾದ ಸತ್ಯಬ್ರತ ಭೋಯಿ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರಾದ ತಿರುಪತಿ ಪಾಣಿಗ್ರಹಿ, ಸಂಜೆ ಸುಮಾರು 7.30ರ ಸುಮಾರಿಗೆ ಈ ಘಟನೆ ನಡೆದಿದ್ದು ರಾತ್ರಿ 12ರ ಹೊತ್ತಿಗೆ ಬೆಳಕಿಗೆ ಬಂತು. ಸಂತ್ರಸ್ತ ವಿದ್ಯಾರ್ಥಿನಿಗೆ ಆರೋಪಿ ಸಿಬ್ಬಂದಿಯ ಹೆಸರು ತಿಳಿದಿಲ್ಲ. ಆದರೆ ನಾವು ಆತನನ್ನು ಗುರುತಿಸಿದ್ದು ಪೊಲೀಸರಿಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದ್ದಾರೆ.

ಆರೋಪಿಯನ್ನು ಕಟಕ್ ಜಿಲ್ಲೆಯ ಅತಗಡ್‌ನ ಮನೋಜ್ ಕುಮಾರ್ ಕುಂತಿಯಾ ಎಂದು ಗುರುತಿಸಲಾಗಿದ್ದು ಆತ ಮಾತ್ರ ತಾನು ನಿರಪರಾಧಿ ತನ್ನ ವಿರುದ್ಧ ಆಧಾರರಹಿತ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ದೂರಿದ್ದಾನೆ. ಮಂಗಳವಾರ ರಾತ್ರಿ ನಾನು ರಾತ್ರಿ ಊಟ ಮುಗಿಸಿ ಕ್ಯಾಂಟೀನ್‌ನಿಂದ ಬರುತ್ತಿದ್ದ ವೇಳೆ ವಿದ್ಯಾರ್ಥಿನಿ ಮತ್ತಾಕೆಯ ಸ್ನೇಹಿತನನ್ನು ಅಶ್ಲೀಲ ಸ್ಥಿತಿಯಲ್ಲಿ ಕಂಡಿದ್ದೆ. ಅವರ ವಿರುದ್ಧ ರೇಗಾಡಿದ ನಾನು ಈ ವಿಷಯವನ್ನು ಪ್ರಾಂಶುಪಾಲರಿಗೆ ತಿಳಿಸುವುದಾಗಿ ಹೇಳಿದ್ದೆ. ಆದರೆ ಹಾಗೆ ಮಾಡದಂತೆ ನನ್ನಲ್ಲಿ ಮನವಿ ಮಾಡಿದ ವಿದ್ಯಾರ್ಥಿನಿ ಇನ್ನು ಮುಂದೆ ಕಾಲೇಜ್ ಕ್ಯಾಂಪಸ್‌ನಲ್ಲಿ ಈ ರೀತಿ ವರ್ತಿಸುವುದಿಲ್ಲ ಎಂದು ಭರವಸೆ ನೀಡಿದ್ದರು. ನಂತರ ನಾನು ನನ್ನ ಕೋಣೆಗೆ ತೆರಳಿದೆ. ಆದರೆ ಮುಂಜಾನೆ ನಾಲ್ಕು ಗಂಟೆಯ ಹೊತ್ತಿಗೆ ಪೊಲೀಸರು ನನ್ನನ್ನು ಬಂಧಿಸಿದರು ಎಂದು ಕುಂತಿಯಾ ತಿಳಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X