ಉಡುಪಿ: ಲೋಕಾಯುಕ್ತರಿಂದ ದೂರು ಸ್ವೀಕಾರ
ಉಡುಪಿ, ಡಿ. 20: ಕರ್ನಾಟಕ ಲೋಕಾಯುಕ್ತ ಕಾಯ್ದೆ ಅಡಿಯಲ್ಲಿ ವಿಚಾರಣೆ ಬಯಸುವ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಠಿಯಿಂದ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಡಿ. 22ರಂದು ಬೆಳಗ್ಗೆ 11ರಿಂದ 12:30 ರವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ, ಅಪರಾಹ್ನ 3ರಿಂದ 4:30ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ, ಡಿ. 23ರಂದು ಬೆಳಗ್ಗೆ 11ರಿಂದ 12:30 ರವೆರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸ್ವೀಕರಿಸಲಾಗುವುದು.
ಉಡುಪಿ ತಾಲೂಕಿಗೆ ಸಂಬಂಧಿಸಿದ ದೂರು ಅರ್ಜಿಗಳನ್ನು ನೀಡುವವರು ನೇರವಾಗಿ ಕರ್ನಾಟಕ ಲೋಕಾಯುಕ್ತ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು. ಸಾರ್ವಜನಿಕರು ನಿಗದಿತ ದೂರು ಅರ್ಜಿಗಳಾದ ಪ್ರವರ್ತ 1 ಮತ್ತು 2ನ್ನು ಪಡೆದು ಅಫೀದವಿತ್ ಮಾಡಿಸಿ ಸಂಬಂಧಪಟ್ಟ ದಾಖಲೆಗಳ ಪ್ರತಿಗಳೊಂದಿಗೆ ದೂರು ಅರ್ಜಿಯನ್ನು ಸಲ್ಲಿಸಬಹುದು ಎಂದು ಉಡುಪಿ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಪ್ರಕಟಣೆ ತಿಳಿಸಿದೆ.





