ವಿವಿಐಪಿ ಕಾಪ್ಟರ್ ಹಗರಣ: ಏರ್ ಮಾರ್ಷಲ್ ಗುಜ್ರಾಲ್ಗೆ ಜಾಮೀನು

ಸಾಂದರ್ಭಿಕ ಚಿತ್ರ
ಪಣಜಿ, ಡಿ. 20: ವಿವಿಐಪಿ ಕಾಪ್ಟರ್ ಹಗರಣಕ್ಕೆ ಸಂಬಂಧಿಸಿ ನಿವೃತ್ತ ವಾಯು ಪಡೆಯ ಮಾರ್ಷಲ್ ಜೆ.ಎಸ್. ಗುಜ್ರಾಲ್ಗೆ ದಿಲ್ಲಿ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.
ಸಮನ್ಸ್ ಜಾರಿಗೊಳಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರಾದ ಜೆ.ಎಸ್. ಗುಜ್ರಾಲ್ಗೆ 2 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಅದೇ ಮೊತ್ತದ ಶ್ಯೂರಿಟಿ ಆಧಾರದಲ್ಲಿ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಜಾಮೀನು ಮಂಜೂರು ಮಾಡಿದರು.
ಈ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟಂಬರ್ನಲ್ಲಿ ಸಮನ್ಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರಾಗಿದ್ದ ಭಾರತೀಯ ವಾಯು ಪಡೆಯ ವರಿಷ್ಠ ಎಸ್.ಪಿ. ತ್ಯಾಗಿ ಹಾಗೂ ಇತರರಿಗೆ ಈ ಹಿಂದೆ ಜಾಮೀನು ನೀಡಲಾಗಿತ್ತು.
ಆರೋಪಿಗಳಿಗೆ ಸಂಬಂಧಿಸಿದ ಆರೋಪ ಪಟ್ಟಿ ಹಾಗೂ ಇತರ ದಾಖಲೆಗಳನ್ನು ಹಸ್ತಾಂತರಿಸುವಂತೆ ತನಿಖಾ ಸಂಸ್ಥೆಗೆ ನಿರ್ದೇಶಿಸಿರುವ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಮೇ 30ಕ್ಕೆ ನಿಗದಿಗೊಳಿಸಿದೆ.
Next Story





