Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮದ್ಯಪಾನ-ಮಾದಕದ್ರವ್ಯ ಸೇವನೆ ಕುರಿತು...

ಮದ್ಯಪಾನ-ಮಾದಕದ್ರವ್ಯ ಸೇವನೆ ಕುರಿತು ಅರಿವು ಅವಶ್ಯ: ಎಚ್.ಸಿ.ರುದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ20 Dec 2017 9:49 PM IST
share
ಮದ್ಯಪಾನ-ಮಾದಕದ್ರವ್ಯ ಸೇವನೆ ಕುರಿತು ಅರಿವು ಅವಶ್ಯ: ಎಚ್.ಸಿ.ರುದ್ರಪ್ಪ

ಧಾರವಾಡ, ಡಿ.20: ಮದ್ಯಪಾನ, ಮಾದಕದ್ರವ್ಯ ಸೇವನೆಗಳಿಂದ ಆರೋಗ್ಯದ ಮೇಲೆ ಸಾಕಷ್ಟು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತವೆ. ದುಶ್ಚಟಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಅವಶ್ಯವಾಗಿವೆ ಎಂದು ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಎಚ್.ಸಿ. ರುದ್ರಪ್ಪಹೇಳಿದ್ದಾರೆ.

ಬುಧವಾರ ನಗರದ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ಏರ್ಪಡಿಸಿದ್ದ ಮದ್ಯಪಾನ ಮತ್ತು ಮಾದಕದ್ರವ್ಯ ಸೇವನೆಗಳಿಂದ ಆರೋಗ್ಯದ ಮೇಲೆ ಹಾನಿ ಕುರಿತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಏರ್ಪಡಿಸಿದ್ದ ತಿಳುವಳಿಕೆ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ ಸೇರಿದಂತೆ ಹಲವು ನಾಯಕರು ದುಶ್ಚಟಗಳ ಕುರಿತು ಜನರಲ್ಲಿ ಅರಿವು ಮೂಡಿಸುವಲ್ಲಿ ಕಾರ್ಯಪ್ರವೃತ್ತರಾಗಿದ್ದರು. ಬೀದಿ ನಾಟಕ, ಜನ ಜಾಗೃತಿ ಜಾಥಾಗಳ ಮೂಲಕ ಮದ್ಯಪಾನದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು. ಹಳ್ಳಿಗಳಲ್ಲಿರುವ ಹೆಣ್ಣು ಮಕ್ಕಳಲ್ಲಿ ಮದ್ಯಪಾನದ ಬಗ್ಗೆ ಜಾಗೃತಿ ಮೂಡಿಸುವುದು ಅತೀ ಅವಶ್ಯವಾಗಿದೆ. ಪ್ರತಿ ವರ್ಷ ಮದ್ಯಪಾನ ವಿರೋಧಿ ದಿನದಂದು ಮದ್ಯಪಾನದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರುದ್ರಪ್ಪ ತಿಳಿಸಿದರು.

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅನ್ವರ್ ಮುಧೋಳ ಮಾತನಾಡಿ, ಮದ್ಯಪಾನವನ್ನು ನಿಯಂತ್ರಿಸುವಲ್ಲಿ ಎಲ್ಲರ ಸಹಕಾರ ಅಗತ್ಯವಿದೆ. ಮದ್ಯಪಾನ ದಾಸ್ಯತ್ವದಿಂದ ಜನರನ್ನು ದೂರಡುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸನ್ನದ್ಧರಾಗಬೇಕು ಎಂದು ಕರೆ ನೀಡಿದರು.

ರಾಮಕೃಷ್ಣ ಸ್ವಾಮಿ ವಿವೇಕಾನಂದ ಆಶ್ರಮದ ಶ್ರೀ ವಿಜಯಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ಬೋಧಿಸಿದರು. ಮದ್ಯಪಾನ ಮತ್ತು ಮಾದಕದ್ರವ್ಯ ಸೇವನೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮದ ಕುರಿತು ಮಾನಸಿಕ ಮತ್ತು ಮಾದಕ ದ್ರವ್ಯ ತಜ್ಞೆ ಡಾ.ಅಶ್ವಿನಿ ಪದ್ಮಶಾಲಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ‘ಕುಡಿತ ಬೇಡ’ ಎಂಬ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮದ್ಯಪಾನ ಸಂಯಮ ಮಂಡಳಿಯ ನಿರ್ದೇಶಕ ಶಫಿ ಮುದ್ದೇಬಿಹಾಳ, ಅಬಕಾರಿ ಇಲಾಖೆಯ ಉಪ ಆಯುಕ್ತ ಬಿ.ಆರ್.ಪಾಟೀಲ್, ಅಬಕಾರಿ ಇನ್ಸ್‌ಪೆಕ್ಟರ್ ಸಂಜೀವ ಬಳಲೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X