ಉಳ್ಳಾಲ: ಇಸ್ಲಾಹಿ ಮಹಿಳಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ

ಮಂಗಳೂರು, ಡಿ. 20: ಉಳ್ಳಾಲದ ಇಸ್ಲಾಹಿ ಮಹಿಳಾ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಇಸ್ಲಾಹಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.20 ಮತ್ತು 21ರಂದು ವಾರ್ಷಿಕ ಕ್ರೀಡೋತ್ಸವವನ್ನು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು.
ಜಮ್ಮು ಕಾಶ್ಮೀರದಲ್ಲಿ ಜರಗಿದ ರಾಷ್ಟ್ರ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸ್ಪರ್ಧಿಸಿದ ವಿದ್ಯಾರ್ಥಿಗಳನ್ನು ಇದೇ ಸಂದರ್ಭದಲ್ಲಿ ಸಚಿವರು ಅಭಿನಂದಿಸಿದರು.ಜಿ.ಅಬ್ದುರ್ರಝಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಟ್ರಸ್ಟಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅಲಿಮಾ ಶಾಝ್ಮಾ ಸ್ವಾಗತಿಸಿದರೆ, ಹಂಝೀನ ವಂದಿಸಿದರು. ಶಿಕ್ಷಕಿಯರಾದ ನಿತಾಶ ಮತ್ತು ಝುಲ್ಫಿ ಕಾರ್ಯಕ್ರಮ ನಿರೂಪಿಸಿದರು.
Next Story





