Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಸ್‌ಮಸ್ ಆಚರಿಸುವಂತೆ ಹಿಂದೂ...

ಕ್ರಿಸ್‌ಮಸ್ ಆಚರಿಸುವಂತೆ ಹಿಂದೂ ವಿದ್ಯಾರ್ಥಿಗಳನ್ನು ಒತ್ತಾಯಿಸಬೇಡಿ

ಕ್ರೈಸ್ತ ಶಾಲೆಗಳಿಗೆ ಹಿಂದೂ ಜಾಗರಣ್ ಮಂಚ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ21 Dec 2017 7:12 PM IST
share
ಕ್ರಿಸ್‌ಮಸ್ ಆಚರಿಸುವಂತೆ ಹಿಂದೂ ವಿದ್ಯಾರ್ಥಿಗಳನ್ನು ಒತ್ತಾಯಿಸಬೇಡಿ

ಲಕ್ನೊ, ಡಿ.21: ಆಗ್ರಾದಲ್ಲಿರುವ ಕ್ರಿಶ್ಚಿಯನ್ ಮಿಷನರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದೂ ವಿದ್ಯಾರ್ಥಿಗಳಿಗೆ ಕ್ರಿಸ್‌ಮಸ್ ಹಬ್ಬ ಆಚರಣೆಯಲ್ಲಿ ಪಾಲ್ಗೊಳ್ಳುವಂತೆ ಬಲವಂತಪಡಿಸಕೂಡದು ಎಂದು ಹಿಂದೂ ಜಾಗರಣ್ ಮಂಚ್ ಎಚ್ಚರಿಕೆ ನೀಡಿದೆ.

 ತಮ್ಮ ಸಲಹೆಯನ್ನು ಪರಿಗಣಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದೂ ಜಾಗರಣ್ ಮಂಚ್(ಎಚ್‌ಜೆಎಂ)ನ ಜಿಲ್ಲಾ ಘಟಕದ ಮುಖಂಡರು ಶಾಲೆಯ ಪ್ರಾಂಶುಪಾಲರಿಗೆ ಪತ್ರ ಬರೆದಿದ್ದಾರೆ ಎಂದು ಎಚ್‌ಜೆಎಂನ ಆಗ್ರಾ ಘಟಕಾಧ್ಯಕ್ಷ ಅಮಿತ್ ಚೌಧರಿ ತಿಳಿಸಿದ್ದಾರೆ.

   ಸಂತಾಕ್ಲಾಸ್‌ನಂತೆ ಬಟ್ಟೆ ಧರಿಸಿ ಶಾಲೆಗಳಲ್ಲಿ ನಡೆಯುವ ಕ್ರಿಸ್‌ಮಸ್ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಶಾಲಾ ಮುಖ್ಯಸ್ಥರು ಸೂಚಿಸಿರುವುದಾಗಿ ಮಿಷನರಿ ಶಾಲೆಗಳಲ್ಲಿ ಕಲಿಯುತ್ತಿರುವ ಹಿಂದೂ ವಿದ್ಯಾರ್ಥಿಗಳ ಪೋಷಕರು ದೂರು ನೀಡಿದ್ದಾರೆ . ಈ ಹಿನ್ನೆಲೆಯಲ್ಲಿ ಆಗ್ರಾದಲ್ಲಿರುವ ಸುಮಾರು 12ಕ್ಕೂ ಹೆಚ್ಚು ಮಿಷನರಿ ಶಾಲೆಗಳಿಗೆ ಪತ್ರ ಬರೆದಿದ್ದೇವೆ. ತಮ್ಮ ಪತ್ರವನ್ನು ಪರಿಗಣಿಸದಿದ್ದರೆ ಬೀದಿಗಿಳಿದು ಹೋರಾಡಿ, ಕ್ರೈಸ್ತ ಧರ್ಮ ಪ್ರಸಾರ ಮಾಡುವ ಶಾಲೆಗಳನ್ನು ಮುಚ್ಚಬೇಕೆಂದು ಪ್ರತಿಭಟನೆ ನಡೆಸುತ್ತೇವೆ ಎಂದು ಚೌಧರಿ ತಿಳಿಸಿದರು.

 ಶಾಲೆಗಳು ಶಿಕ್ಷಣದ ಕುರಿತು ಮಾತ್ರ ಗಮನ ನೀಡಬೇಕು. ನಾವು ಯಾವುದೇ ಧರ್ಮ ಅಥವಾ ಹಬ್ಬದ ಆಚರಣೆಯನ್ನು ವಿರೋಧಿಸುತ್ತಿಲ್ಲ. ಆದರೆ ಕ್ರಿಶ್ಚಿಯನ್ ಧರ್ಮ ಪ್ರಸಾರದ ಮೂಲಕ ಮತಾಂತರಗೊಳಿಸುವ ಹುನ್ನಾರಕ್ಕೆ ನಮ್ಮ ವಿರೋಧವಿದೆ . ಇದರ ಬದಲು ಹಿಂದೂಗಳ ಹಬ್ಬದಂತೆ, ಕ್ರಿಸ್‌ಮಸ್ ದಿನದಂದು ರಜೆ ಘೋಷಿಸಲಿ ಎಂದು ಚೌಧರಿ ಹೇಳಿದರು.

 ಆದರೆ ಈ ಆರೋಪಗಳನ್ನು ತಳ್ಳಿ ಹಾಕಿರುವ ಸೈಂಟ್ ಲಾರೆನ್ಸ್ ಸೆಮಿನರಿಯ ಧಾರ್ಮಿಕ ನಿರ್ದೇಶಕ ಫಾದರ್ ಮೋನ್ ಲಾಝರಸ್, ಕ್ರಿಶ್ಚಿಯನ್ ಆಡಳಿತದ ಶಾಲೆಗಳು ಕಾನೂನಿಗೆ ಒಳಪಟ್ಟು ಕಾರ್ಯನಿರ್ವಹಿಸುತ್ತವೆ. ಶಿಕ್ಷಣವನ್ನು ಒಂದು ಪವಿತ್ರಕಾರ್ಯದಂತೆ ಪರಿಗಣಿಸುವ ಸಮುದಾಯದ ವಿರುದ್ಧ ಆಧಾರರಹಿತ ಆರೋಪ ಹೊರಿಸಿ, ಬೆದರಿಕೆಯ ಪತ್ರ ಬರೆಯಲು ಇವರಿಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ.

 ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ನಮಗೆ ಇದುವರೆಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ. ಆದರೆ ಈ ಕುರಿತ ಸುದ್ದಿ ತಿಳಿದುಬಂದ ಕಾರಣ ಇದರ ಬಗ್ಗೆ ಗಮನ ಹರಿಸಲಾಗುವುದು. ಕ್ರಿಸ್‌ಮಸ್ ಹಬ್ಬ ಶಾಂತಿಯುತವಾಗಿ ಆಚರಿಸುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಗ್ರಾದ ಪೊಲೀಸ್ ಮಹಾನಿರ್ದೇಶಕ ಕನ್ವರ್ ಅನುಪಮ್ ಸಿಂಗ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X