Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರವಿಬೆಳಗೆರೆಗೆ ಜಾಮೀನು ಮಂಜೂರು

ರವಿಬೆಳಗೆರೆಗೆ ಜಾಮೀನು ಮಂಜೂರು

ಸಹೋದ್ಯೋಗಿ ಹತ್ಯೆಗೆ ಸುಪಾರಿ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 Dec 2017 8:08 PM IST
share
ರವಿಬೆಳಗೆರೆಗೆ ಜಾಮೀನು ಮಂಜೂರು

ಬೆಂಗಳೂರು, ಡಿ.21: ಸಹೋದ್ಯೋಗಿಯ ಹತ್ಯೆಗೆ ಸುಪಾರಿ ನೀಡಿದ ಆರೋಪ ಪ್ರಕರಣ ಸಂಬಂಧ ‘ಹಾಯ್ ಬೆಂಗಳೂರ್’ ವಾರಪತ್ರಿಕೆಯ ಸಂಸ್ಥಾಪಕ ರವಿ ಬೆಳಗೆರೆ ಅವರಿಗೆ ನಗರದ 65ನೆ ಸೆಷನ್ಸ್ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪ್ರಕರಣ ಸಂಬಂಧ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಧುಸೂದನ್, ಸಾಕ್ಷಿ ನಾಶ ಮಾಡಬಾರದು ಹಾಗೂ ತನಿಖೆಗೆ ಸಹಕಾರ ನೀಡಬೇಕು ಎಂದು ಷರತ್ತು ಹಾಕಿ, ರವಿ ಬೆಳಗೆರೆ ಅವರಿಗೆ 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ಪಡೆದು ಜಾಮೀನು ನೀಡಲಾಗಿದೆ.

ಈ ಹಿಂದೆ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಆ ಜಾಮೀನು ಅವಧಿ ಕೊನೆಗೊಂಡಿದ್ದ ಕಾರಣ ಡಿ.18ರಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅಂದೇ ವಾದ ಪ್ರತಿವಾದ ಆಲಿಸಿ ಡಿ.21ರವರೆಗೆ ಮಧ್ಯಂತರ ಜಾಮೀನನ್ನು ಮತ್ತೆ ವಿಸ್ತರಿಸಿದ್ದರು. ಬೆಳಗೆರೆ ಪರವಾಗಿ ವಕೀಲ ಕೆ.ದಿವಾಕರ್ ಜಾಮೀನು ಅರ್ಜಿ ಸಲ್ಲಿಸಿದ್ದರು.

ಆಕ್ಷೇಪಣೆ: ಜಾಮೀನು ಮಂಜೂರಿಗೆ ಆಕ್ಷೇಪಣೆ ಸಲ್ಲಿಸಿದ್ದ ಸರಕಾರಿ ವಕೀಲ, ರವಿ ಬೆಳಗೆರೆ ಅವರ ಮೇಲೆ ದಾಖಲಾದ ಪ್ರಕರಣ ಗಂಭೀರವಾದದ್ದು. ಅಲ್ಲದೆ, ಇವರ ವಿರುದ್ಧ ವನ್ಯಜೀವಿ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು ಹೇಳಿದರು ಎನ್ನಲಾಗಿದೆ.

ಹದಗೆಟ್ಟ ಆರೋಗ್ಯ: ರವಿ ಬೆಳಗೆರೆ ಅವರ ಆರೋಗ್ಯದಲ್ಲಿ ಕಳೆದ ರಾತ್ರಿ ಏರುಪೇರು ಉಂಟಾಗಿದ್ದು, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಮೇಲೆ ಬಾಡಿ ವಾರೆಂಟ್ ಇದ್ದ ಕಾರಣಕ್ಕೆ ಸರಕಾರಿ ಆಸ್ಪತ್ರೆಯಲ್ಲೆ ಚಿಕಿತ್ಸೆ ಕೊಡಿಸುವುದು ಅನಿವಾರ್ಯವಾಗಿತ್ತು. ಹೀಗಾಗಿ, ಅವರನ್ನು ಬುಧವಾರ ರಾತ್ರಿ ಜಯದೇವ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆ ರವಾನೆ ಮಾಡಲಾಯಿತು.

ಹೈಕೋರ್ಟ್‌ನಲ್ಲಿ ಹೋರಾಟ
ಜಾಮೀನು ಮಂಜೂರು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಕೀಲ ಕೆ.ದಿವಾಕರ್, ರವಿ ಬೆಳಗೆರೆ ಅವರ ವಿರುದ್ಧ ಸುಳ್ಳು ಎಫ್‌ಐಆರ್ ದಾಖಲಿಸಲಾಗಿದ್ದು, ಇದನ್ನು ರದ್ದು ಪಡಿಸುವಂತೆ ಜನವರಿ ಮೊದಲ ವಾರದಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ.
-ಕೆ.ದಿವಾಕರ್, ರವಿಬೆಳಗೆರೆ ವಕೀಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X