ಗಾಂಜಾ ಮಾರಾಟ: ಓರ್ವನ ಬಂಧನ

ಬೆಂಗಳೂರು, ಡಿ.21: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಹನುಮಂತನಗರ ಠಾಣಾ ಪೊಲೀಸರು ಬಂಧಿಸಿ 450 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಹನುಮಂತನಗರದ ಕೆಂಪೇಗೌಡ ಆಟದ ಮೈದಾನ ಬಳಿಯ ಟೆಂಪೋ ನಿಲ್ದಾಣದ ಬಳಿ ಬ್ಯಾಂಕ್ ಕಾಲನಿಯ ಕಾವೇರಿನಗರದ ದೀಪಕ್ ಬಂಧಿತ ಆರೋಪಿ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story





