Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಬಿಜೆಪಿಗೆ ಸೇರ್ಪಡೆಯಾದ...

ಶಿವಮೊಗ್ಗ: ಬಿಜೆಪಿಗೆ ಸೇರ್ಪಡೆಯಾದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಷಣ್ಮುಖಪ್ಪ

ವಾರ್ತಾಭಾರತಿವಾರ್ತಾಭಾರತಿ22 Dec 2017 5:08 PM IST
share
ಶಿವಮೊಗ್ಗ: ಬಿಜೆಪಿಗೆ ಸೇರ್ಪಡೆಯಾದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಷಣ್ಮುಖಪ್ಪ

ಶಿವಮೊಗ್ಗ, ಡಿ. 22: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮುಖಂಡ, ಜಿಲ್ಲಾ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಷಣ್ಮುಖಪ್ಪರವರು ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಶಾಸಕ ಬಿ.ವೈ.ರಾಘವೇಂದ್ರ, ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡರವರು ಷಣ್ಮುಖಪ್ಪ ಮತ್ತವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು. ನಂತರ ನಡೆದ ಕಾರ್ಯಕರ್ತರ ಸಭೆಯಲ್ಲಿ ಷಣ್ಮುಖಪ್ಪ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉತ್ತಮ ಆಡಳಿತ ಮೆಚ್ಚಿ ಹಾಗೂ ಬಿ.ಎಸ್.ಯಡಿಯೂರಪ್ಪರವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂಬ ಉದ್ದೇಶದಿಂದ ತಾವು ಬಿಜೆಪಿ ಮರು ಸೇರ್ಪಡೆಯಾಗುತ್ತಿದ್ದೆನೆ ಎಂದು ತಿಳಿಸಿದರು. 

ಮುಂಬರುವ ವಿಧಾನಸಭೆ ಚುನಾಣೆಯಲ್ಲಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಗೆಲುವಿಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೆನೆ. ಈಗಿನಿಂದಲೇ ಮನೆ ಮನೆಗೆ ತೆರಳಿ ಪಕ್ಷದ ಪರವಾಗಿ ಮತಯಾಚನೆ ಮಾಡುತ್ತೆನೆ. ಈ ಬಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯು ಅತ್ಯದಿಕ ಮತಗಳ ಅಂತರದಲ್ಲಿ ಜಯ ಸಾಧಿಸುವುದು ನಿಶ್ಚಿತವಾಗಿದೆ ಎಂದು ಹೇಳಿದರು. 

ಶಿವಮೊಗ್ಗಕ್ಕೆ ರ್ಯಾಲಿ: ಸುದ್ದಿಗೋಷ್ಠಿಯಲ್ಲಿ ಬಿ.ವೈ.ರಾಘವೇಂದ್ರ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ರಾಜ್ಯದಲ್ಲಿ ನವ ಕರ್ನಾಟಕ ನಿರ್ಮಾಣದ ಗುರಿಯೊಂದಿಗೆ ರಾಜ್ಯದಾದ್ಯಂತ ನಡೆಯುತ್ತಿರುವ ಪರಿವರ್ತನಾ ರ್ಯಾಲಿಯು ಡಿ.27ರಿಂದ ಜ.2 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. 

ರಾಜ್ಯದಲ್ಲಿ ಆಡಳಿತ ರೂಢ ಕಾಂಗ್ರೆಸ್ ಸರ್ಕಾರದ ಹಣ ಮತ್ತು ಅಧಿಕಾರಿಗಳನ್ನು ದುರು ಪಯೋಗಪಡಿಸಿಕೊಂಡು ಸತ್ಯದ ನಡಿಗೆ ಸಮಾವೇಶಗಳನ್ನು ಮಾಡುತ್ತಿದೆ. ರೈತರ ಹಿತವನ್ನು ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಸಿದ್ದರಾಮ್ಯಯ ನೇತೃತ್ವದ ಕಾಂಗ್ರೆಸ್‍ನ ದುರಾಡಳಿತವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಪರಿವರ್ತನಾ ರ್ಯಾಲಿ ನಡೆಯುತ್ತಿದ್ದು, ಈಗಾಗಲೇ 123 ಕ್ಷೇತ್ರಗಳಲ್ಲಿ ಅತ್ಯಂತ ಯಶಸ್ವಿಯಾಗಿದ್ದು, ಜನರ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.

ಡಿ. 27 ರಂದು ಜಿಲ್ಲೆಗೆ ಪರಿವರ್ತನಾ ರ್ಯಾಲಿ ಪ್ರವೇಶ ಮಾಡಲಿದ್ದು, ಅಂದು ಶಿಕಾರಿಪುರ, ಸೊರಬದಲ್ಲಿ ಸಮಾವೇಶ ಗಳು ನಡೆಯಲಿವೆ. 28ರಂದು ಸಾಗರ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಹರಮಘಟ್ಟದಲ್ಲಿ, ಸಂಜೆ ಶಿವಮೊಗ್ಗ ಎನ್‍ಇಎಸ್ ಮೈದಾನದಲ್ಲಿ ಹಾಗೂ 29 ತೀರ್ಥಹಳ್ಳಿಯಲ್ಲಿ ಸಮಾವೇಶಗಳು ನಡೆಯಲಿದ್ದು, ಜ. 2ರಂದು ಭದ್ರಾವತಿಯಲ್ಲಿ ನಡೆಯಲಿದೆ. ಈ ಸಮಾವೇಶ ದಲ್ಲಿ ಒಟ್ಟು 2 ಲಕ್ಷಕ್ಕೂ  ಹೆಚ್ಚಿನ ಕಾರ್ಯಕರ್ತರು ಭಾಗವಹಿಸಲಿ ದ್ದಾರೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X