Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾನೇಶ್ವರಿ ಹತ್ಯೆಗೆ ಖಂಡನೆ : ಬಹುಜನ...

ದಾನೇಶ್ವರಿ ಹತ್ಯೆಗೆ ಖಂಡನೆ : ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ22 Dec 2017 7:05 PM IST
share
ದಾನೇಶ್ವರಿ ಹತ್ಯೆಗೆ ಖಂಡನೆ : ಬಹುಜನ ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

ಮಡಿಕೇರಿ,ಡಿ.22 : ವಿಜಯಪುರದಲ್ಲಿ ಇತ್ತೀಚೆಗೆ ನಡೆದ 9ನೇ ತರಗತಿ ವಿದ್ಯಾರ್ಥಿನಿ ದಾನೇಶ್ವರಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಖಂಡಿಸಿ ನಗರದಲ್ಲಿ ಪ್ರತಿಭಟನೆ ನಡೆಸಿದ ಬಹುಜನ ವಿದ್ಯಾರ್ಥಿ ಸಂಘ ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿತು. 

ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿದ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಘಟನೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. 

ರಾಷ್ಟ್ರೀಯ ಅಪರಾಧ ದಾಖಲೆಯ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ ಎಸ್.ಸಿ, ಎಸ್.ಟಿಗಳ ಮೇಲೆ ದೌರ್ಜನ್ಯ ಪ್ರಕರಣಗಳು ಸುಮಾರು 1.50 ಲಕ್ಷ ಮೀರಿದ್ದು, ಅತ್ಯಾಚಾರ ಪ್ರಕರಣಗಳು 10 ಸಾವಿರದಷ್ಟು ದಾಖಲಾಗಿದೆ ಎಂದು ಸಂಘದ ಪ್ರಮುಖರು ಆತಂಕ ವ್ಯಕ್ತಪಡಿಸಿದರು. 

ಇಂದು ಓದಲು ಕಳುಹಿಸಿದ ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ದೇಶದಲ್ಲಿ ಪ್ರತಿ ಹತ್ತು ನಿಮಿಷಕ್ಕೆ ಒಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಯುತ್ತದೆ. ಇಂತಹ ಕೃತ್ಯಗಳನ್ನು ತಡೆಯಲು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. 

ರಾಜ್ಯ ಸರ್ಕಾರವು ಹಲವು ಭಾಗ್ಯಗಳನ್ನು ಜಾರಿಗೆ ತಂದರೂ ಹೆಣ್ಣು ಮಕ್ಕಳು ಅದರಲ್ಲೂ ದಲಿತ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿಲ್ಲ. ದಲಿತರಿಗೆ ಮತ್ತು ಅಲ್ಪಸಂಖ್ಯಾತರಿಗೆ ಸೂಕ್ತ ರಕ್ಷಣೆ ಒದಗಿಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸಂಘದ ಜಿಲ್ಲಾ ಸಂಯೋಜಕರಾದ ಸಿ.ಜೆ.ಮೋಹನ್ ಮೌರ್ಯ ಅಸಮಾಧಾನ ವ್ಯಕ್ತಪಡಿಸಿದರು.  

ರಾಜ್ಯ ಸರಕಾರ ದಾನಮ್ಮನ ಪ್ರಕರಣದ ಹೊಣೆ ಹೊರಬೇಕು, ಆರೋಪಿಗಳನ್ನು ತಕ್ಷಣ ಬಂಧಿಸಬೇಕು, ಹೀನ ಕೃತ್ಯಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ದಾನಮ್ಮನ ಪ್ರಕರಣವನ್ನು ನಿಭಾಯಿಸುವಲ್ಲಿ ಸಂಪೂರ್ಣವಾಗಿ ವಿಫಲವಾರಾಗಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರನ್ನು ಬದಲಾಯಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. 

ಪ್ರತಿಭಟನೆಯಲ್ಲಿ ಬಹುಜನ ವಿದ್ಯಾರ್ಥಿ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್, ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಮತ್ತಿತರ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X