Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋವಾ ಮುಖ್ಯಮಂತ್ರಿಯಿಂದ ಆಹ್ವಾನ ಬಂದ...

ಗೋವಾ ಮುಖ್ಯಮಂತ್ರಿಯಿಂದ ಆಹ್ವಾನ ಬಂದ ಕೂಡಲೇ ಮಾತುಕತೆಗೆ ತೆರಳುತ್ತೇನೆ : ಸಿದ್ದರಾಮಯ್ಯ

ಮಹಾದಾಯಿ ನದಿ ನೀರು ಹಂಚಿಕೆ ವಿಚಾರ

ವಾರ್ತಾಭಾರತಿವಾರ್ತಾಭಾರತಿ22 Dec 2017 7:29 PM IST
share
ಗೋವಾ ಮುಖ್ಯಮಂತ್ರಿಯಿಂದ ಆಹ್ವಾನ ಬಂದ ಕೂಡಲೇ ಮಾತುಕತೆಗೆ ತೆರಳುತ್ತೇನೆ : ಸಿದ್ದರಾಮಯ್ಯ

ರಾಮದುರ್ಗ,ಡಿ.22 : ಮಹಾದಾಯಿ ಕುರಿತಾದ ಮಾತುಕತೆಗೆ ಗೋವಾ ಮುಖ್ಯಮಂತ್ರಿಯವರಿಂದ ಆಹ್ವಾನ ಬಂದ ಕೂಡಲೇ ಹೋಗಲು ತಯಾರಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಬೆಳಗಾವಿ ಜಿಲ್ಲೆಯ ರಾಮದುರ್ಗ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮುಖ್ಯಮಂತ್ರಿಯವರು ಮಾತನಾಡಿದರು.

ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿದೆ ಎಂಬ ಹಿನ್ನೆಲೆಯಲ್ಲಿ ಮಾತುಕತೆಗೆ ಸಿದ್ದ ಎಂದು ಹೇಳುತ್ತಿಲ್ಲ. ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆಗೆ ಹಿಂದೆಯೂ ಸಿದ್ಧವಾಗಿದ್ದೆ. ಈಗಲೂ ತಯಾರಿದ್ದೇನೆ ಎಂದರು.

ಕುಡಿಯುವ ನೀರಿಗೆ ನಮ್ಮ ಆದ್ಯತೆ. ನ್ಯಾಯವೂ ನಮ್ಮ ಪರವಾಗಿದೆ. ನ್ಯಾಯ ಮಂಡಳಿಯಲ್ಲಿಯೂ ನಮಗೇ ನ್ಯಾಯ ಸಿಗುವ ವಿಶ್ವಾಸ ಇದೆ. 

ಸಿದ್ದರಾಮಯ್ಯ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಹಗುರವಾಗಿ ಮಾತನಾಡಿದ್ದಾರೆ. ನಾನೂ ಅದೇ ರೀತಿ ಹೇಳಬಹುದು. ಆದರೆ ಹೇಳಲಾರೆ. ನಿಮ್ಮ ಮೇಲೆ ನಂಬಿಕೆ ಇಲ್ಲ ಎಂದು ಗೋವಾದವರಿಗೆ ಹೇಳಬೇಕಾದವರು ನಾವು. ಆದರೆ ಇಲ್ಲಿ ಉಲ್ಟಾ ಆಗಿದೆ.

ಮಾತುಕತೆಗೆ ಬನ್ನಿ ಎಂದು ಗೋವಾ ಮುಖ್ಯಮಂತ್ರಿಯವರಿಗೆ ಹಲವಾರು ಬಾರಿ ಪತ್ರ ಬರೆದರೂ ಪ್ರತಿಕ್ರಿಯೆ ಬರಲಿಲ್ಲ. ಬದಲಿಗೆ ಅಲ್ಲಿಯ ನೀರಾವರಿ ಸಚಿವರು ಕರ್ನಾಟಕ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.

ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ಯಡಿಯೂರಪ್ಪ ಅವರು ಒಂದು ತಿಂಗಳಲ್ಲಿ ಮಹಾದಾಯಿ ನೀರು ತರುತ್ತೇನೆ ಎಂದರು. ನೀರು ಬಂದರೆ ಬೇಡ ಎನ್ನುವವರು ಯಾರು ?, ಒಂದು ವರ್ಷದಿಂದ ಸುಮ್ಮನಿದ್ದವರು ಈಗ ನೀರು ತರಲು ಹೊರಟಿದ್ದಾರೆ. ಬಿಜೆಪಿಯವರು ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಗೋವಾದ ಜೊತೆ ಮಾತುಕತೆಗೆ ಮುಂದಾಗಿದ್ದಾರೆ. ನಾವು ಆ ರೀತಿ ಅಲ್ಲ, ಯಾವುದೇ ಕ್ಷಣದಲ್ಲೂ ಮಾತುಕತೆಗೆ ತಯಾರಿದ್ದೇವೆ ಎಂದರು.

ಶಿಷ್ಟಾಚಾರದ ಪ್ರಕಾರ ಗೋವಾ ಮುಖ್ಯಮಂತ್ರಿಯವರು ನನಗೆ ಪತ್ರ ಬರೆಯಬೇಕಿತ್ತು. ಆದರೆ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಇಷ್ಟಕ್ಕೂ ಮಾತುಕತೆಗೆ ಹೋಗಬೇಕಾದವರು ನಾನು ಅಥವಾ ಜಲ ಸಂಪನ್ಮೂಲ ಸಚಿವರು. 

ಈಗ ನಾನು ಗೋವಾ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮಾತುಕತೆಗೆ ತಯಾರಿರುವುದಾಗಿ ಹೇಳುತ್ತೇನೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X