Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಡಗದಾಳು ಗ್ರಾಮದಲ್ಲಿ ಗಮನ ಸೆಳೆದ...

ಕಡಗದಾಳು ಗ್ರಾಮದಲ್ಲಿ ಗಮನ ಸೆಳೆದ ಗ್ರಾಮೀಣ ಕ್ರೀಡಾಕೂಟ

ಜನಪದ ಸಂಸ್ಕೃತಿ, ಕ್ರೀಡೆಗಳನ್ನು ನಶಿಸಲು ಬಿಡದಿರಿ : ಕ್ಷೇತ್ರಶಿಕ್ಷಣಾಧಿಕಾರಿ ಗಾಯತ್ರಿ.

ವಾರ್ತಾಭಾರತಿವಾರ್ತಾಭಾರತಿ22 Dec 2017 7:55 PM IST
share
ಕಡಗದಾಳು ಗ್ರಾಮದಲ್ಲಿ ಗಮನ ಸೆಳೆದ ಗ್ರಾಮೀಣ ಕ್ರೀಡಾಕೂಟ

ಮಡಿಕೇರಿ,ಡಿ.22 :ಜನಪದ ಸಂಸ್ಕೃತಿಯೇ ಕಣ್ಮರೆಯಾಗುತ್ತಿರುವ ಈ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳನ್ನು ಮಕ್ಕಳಿಗೆ ತಿಳಿಸುವ ಅತ್ಯಗತ್ಯತೆಯಿದ್ದು, ಹಿಂದಿನ ಕಾಲದ ಆಟಗಳನ್ನು ನಶಿಸಲು ಬಿಡಬಾರದು ಎಂದು ಮಡಿಕೇರಿ ತಾಲೂಕು ಕ್ಷೇತ್ರಶಿಕ್ಷಣಾಧಿಕಾರಿ ಗಾಯತ್ರಿ ಹೇಳಿದ್ದಾರೆ. 

ಕಡಗದಾಳು ಪ್ರೌಡಶಾಲೆಯಲ್ಲಿ  ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ  ಮಡಿಕೇರಿ ತಾಲೂಕು ಜಾನಪದ ಪರಿಷತ್ , ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್, ಬಿ.ಇ.ಓ. ಕಛೇರಿಗಳ ಸಂಯುಕ್ತಾಶ್ರಯದಲ್ಲಿ ಆಯೋಜಿತ ಗ್ರಾಮೀಣ ಕ್ರೀಡಾಕೂಟವನ್ನು ಲಗೋರಿ ಆಟದ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ  ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮಕ್ಕಳಲ್ಲಿ ಮೊಬೈಲ್ ವ್ಯಾಮೋಹ ಹೆಚ್ಚುತ್ತಲೇ ಇರುವುದರಿಂದಾಗಿ ಗ್ರಾಮೀಣ ಕ್ರೀಡೆಗಳತ್ತ ಆಸಕ್ತಿ ಕಡಿಮೆಯಾಗಿದೆ.  ಆಧುನಿಕ ತಂತ್ರಜ್ಞಾನದ ಪ್ರಬಾವದಲ್ಲಿ ಜನಪದೀಯ ಕ್ರೀಡೆಗಳನ್ನೇ ಮರೆಯುತ್ತಿದ್ದೇವೆ ಎಂದು ವಿಷಾಧಿಸಿದರು. ಗ್ರಾಮೀಣ ಕ್ರೀಡೆಗಳು ಮಾನಸಿಕ ಮತ್ತು ದೈಹಿಕ ಬುದ್ದಿಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ ಎಂದೂ ಗಾಯತ್ರಿ ಅಭಿಪ್ರಾಯಪಟ್ಟರು.

ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಮಾತನಾಡಿ, ರಾಜರ ಕಾಲದಲ್ಲಿಯೂ ಗ್ರಾಮೀಣ ಕ್ರೀಡೆಗಳಿಗೆ ಅಪಾರವಾದ ಮಹತ್ವವಿತ್ತು. ಹಿಂದಿನ ಕಾಲದಲ್ಲಿ ಗ್ರಾಮೀಣ ಆಟಗಳು ಸಂಸ್ಕೃತಿ, ಒಗ್ಗಟ್ಟಿನ ಪ್ರತೀಕವಾಗಿದ್ದವು. ಹಳ್ಳಿಯ ಒಳ್ಳೆ ಮನಸ್ಸುಗಳನ್ನು ಗ್ರಾಮೀಣ ಕ್ರೀಡೆಗಳು ಬಿಂಬಿಸುತ್ತಿದ್ದವು ಎಂದು ಹೇಳಿದರು. 

ಜಾನಪದ ಪರಿಷತ್ ಪ್ರದಾನ ಕಾರ್ಯದರ್ಧಿ ಮುನೀರ್ ಅಹಮ್ಮದ್ ಮಾತನಾಡಿ, ಜಾತಿ, ಧರ್ಮದ ದ್ವೇಷಾಸೂಯೆಗಳಿಂದ ದೂರವಿರುವ ಗ್ರಾಮೀಣ ಕ್ರೀಡೆಗಳು ಉತ್ತಮ ಸಮಾಜದ ಪ್ರತಿಬಿಂಬದಂತಿದ್ದು, ಪ್ರಾಚೀನ ಆಟಗಳೇ ಇಂದಿನ ಆಧುನಿಕ ದಿನಮಾನಗಳಲ್ಲಿ ಆಧುನಿಕ ಸ್ವರೂಪ ಪಡೆದಿದೆ ಎಂದು ಹೇಳಿದರಲ್ಲದೇ, ಮೊಬೈಲ್, ಟಿ.ವಿ. ಗಳ ದಾಸರಾಗಿರುವ ಇಂದಿನ ಮಕ್ಕಳಲ್ಲಿ ಗ್ರಾಮೀಣ ಕ್ರೀಡೆಗಳ ತಿಳುವಳಿಕೆ ಮೂಡಿಸುವಲ್ಲಿ ಗ್ರಾಮೀಣ ಕ್ರೀಡಾಕೂಟಗಳು ಸಹಕಾರಿ ಎಂದರು. 

ಜಿಲ್ಲಾ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಉಪನಿರ್ದೇಶಕಿ ಜಯಲಕ್ಷೀ ಬಾಯಿ ಮಾತನಾಡಿ, ಜಿಲ್ಲೆಯಲ್ಲಿ ಗ್ರಾಮೀಣ ಕ್ರೀಡಾಕೂಟದ ಮೂಲಕ ಮಕ್ಕಳಲ್ಲಿ ಹಳ್ಳಿಯ ಆಟಗಳ ಬಗ್ಗೆ ತಿಳುವಳಿಕೆ ಮತ್ತು ಜಾಗೃತಿ ಮೂಡಿಸಲಾಗುತ್ತಿದೆ. ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಬೆಳಕಿಗೆ ತರುವಲ್ಲಿ ಇಂಥ ಕ್ರೀಡಾಕೂಟಗಳು ನೆರವಾಗುತ್ತಿದೆ ಎಂದರು.

ಮಡಿಕೇರಿ ತಾಲೂಕು ಜಾನಪದ ಪರಿಷತ್ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಅನಿಲ್ ಎಚ್.ಟಿ. ಮಾತನಾಡಿ, ತಾಲೂಕು ಗ್ರಾಮೀಣ ಕ್ರೀಡಾಕೂಟಕ್ಕೆ ನಿರೀಕ್ಷೆಗೂ ಮೀರಿ ಸ್ಪಂದನ ದೊರಕಿದ್ದು 17 ಶಾಲೆಗಳ 364 ಕ್ರೀಡಾಪಟುಗಳು ವಿವಿಧ ಗ್ರಾಮೀಣ ಕ್ರೀಡಾಸ್ಪರ್ಧೆಗಳಲ್ಲಿ ಪಾಲ್ಗೊಂಡಿರುವುದು ಗ್ರಾಮೀಣ ಕ್ರೀಡಾಕೂಟದ ಅಗತ್ಯತೆಗೆ ನಿದರ್ಶನ ಎಂದರು.

ರೋಟರಿ ಮಿಸ್ಟಿ ಹಿಲ್ಸ್ ಉಪಾಧ್ಯಕ್ಷ ಎಸ್.ಎಸ್.ಸಂಪತ್ ಕುಮಾರ್, ಯೋಜನಾ ನಿರ್ದೇಶಕ  ಪಿ.ಆರ್. ರಾಜೇಶ್, ಜಾನಪದ ಪರಿಷತ್ ಕ್ರೀಡಾ ಸಂಚಾಲಕಿ ಕೆ.ಜಯಲಕ್ಷ್ಮಿ, ಜಾನಪದ ಪರಿಷತ್ ಉಪಾಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ರಾಣಿ ಮಾಚಯ್ಯ, ಸಂಘಟನಾ ಕಾರ್ಯದರ್ಶಿ ಉಜ್ವಲ್ ರಂಜಿತ್, ಎಂ.ಬಿ.ಜೋಯಪ್ಪ, ಸೋಮವಾರಪೇಟೆ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಚಂದ್ರಮೋಹನ್, ಕಡಗದಾಳು ಪ್ರೌಡಶಾಲಾ ಮುಖ್ಯೋಪಾಧ್ಯಾಯಿನಿ ಗಂಗಮ್ಮ, ಕಡಗದಾಳು ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ನೀಲಮ್ಮ, ಲೇಖಕಿ ಭಾಗೀರಥಿ ಹುಲಿತಾಳ ಪಾಲ್ಗೊಂಡಿದ್ದರು.  ಹಸಿನಾ ಮತ್ತು ತಂಡ ಪ್ರಾಥಿ9ಸಿ, ಆರತಿ ಹೆದ್ದಾರಿಮನೆ ನಿರೂಪಿಸಿ, ಅನಿಲ್ ಎಚ್.ಟಿ. ಸ್ವಾಗತಿಸಿ,ವಂದಿಸಿದರು.

ಮನಸೆಳೆದ ಗ್ರಾಮೀಣ ಕ್ರೀಡೆಗಳು  

ಕಡಗದಾಳು ಪ್ರೌಡಶಾಲಾ ಮೈದಾನದಲ್ಲಿ ಆಯೋಜಿತ  ಗ್ರಾಮೀಣ ಕ್ರೀಡಾಕೂಟದಲ್ಲಿ ಅತ್ಯಧಿಕ ಕ್ರೀಡಾಪಟುಗಳು ವಿವಿಧ ಶಾಲೆಗಳಿಂದ ಪಾಲ್ಗೊಂಡಿದ್ದರು. ಮೂರು ಕಾಲಿನ ಓಟ, ಚನ್ನಮಣೆ, ಬುಗುರಿ, ಗೋಲಿಯಾಟ, ಚಮಚದಲ್ಲಿ ನಿಂಬೆ ಹಣ್ಣು ಇರಿಸಿಕೊಂಡು ಓಡುವ ಸ್ಪರ್ಧೆ, ಗೋಣಿಚೀಲ ಕಟ್ಟಿಕೊಂಡು ಓಟದ ಸ್ಪರ್ಧೆ, ಅದೃಷ್ಟದಾಟ, ಹಿಮ್ಮುಖ ಓಟ ಸ್ಪರ್ಧೆಗಳಲ್ಲಿ ಅತ್ಯಧಿಕ ವಿದ್ಯಾರ್ಥಿಗಳು ಪಾಲ್ಗೊಂಡು ಗ್ರಾಮೀಣ ಕ್ರೀಡೆಯಲ್ಲಿ ತಮಗಿರುವ ಆಸಕ್ತಿಗೆ ಸಾಕ್ಷಿಯಾದರು. ದೈಹಿಕ ಶಿಕ್ಷಕರಾದ ಕೆ.ಕೆ.ಪೂವಣ್ಣ, ಕಿರಣ್, ತಿಮ್ಮಯ್ಯ ತೀರ್ಪುಗಾರಿಕೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X