ದಲಿತ ವಿದ್ಯಾರ್ಥಿನಿಯ ಹತ್ಯೆ-ಕೊಲೆ ಪ್ರಕರಣ : ನ್ಯಾಯಾಂಗ ತನಿಖೆಗೆ ಆಗ್ರಹ

ಬೆಂಗಳೂರು, ಡಿ.22: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನ್ವೇಶ್ವರಿ ಮೇಲಿನ ಅತ್ಯಾಚಾರ, ಕೊಲೆ ಗಂಭೀರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಶುಕ್ರವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ದಲಿತ ವಿದ್ಯಾರ್ಥಿನಿ ದಾನ್ವೇಶ್ವರಿ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಕನ್ನಡ ಒಕ್ಕೂಟ, ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಾಟಾಳ್ ನಾಗರಾಜ್, ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನ್ವೇಶ್ವರಿ ಮೇಲಿನ ಅತ್ಯಾಚಾರ, ಕೊಲೆ ಗಂಭೀರ ಖಂಡನೀಯ. ಮಹಿಳೆಯರಿಗೆ ಸೂಕ್ತ ಭದ್ರತೆ ನೀಡುವ ಜವಾಬ್ದಾರಿ ಸರಕಾರದ ಮೇಲಿದೆ ಎಂದು ಹೇಳಿದರು.
ದಾನ್ವೇಶ್ವರಿ ಹತ್ಯೆ ಪ್ರಕರಣ ಗಂಭೀರವಾಗಿದ್ದು, ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು.ಅದೇ ರೀತಿ, ಸಂಸತ್ತಿನ ಕಲಾಪದಲ್ಲೂ ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಕಾನೂನು ರೂಪಿಸಬೇಕು ಎಂದು ವಾಟಾಳ್ ಆಗ್ರಹಿಸಿದರು.
Next Story





