ಮೈಸೂರು : ಅಪರಿಚಿತ ಮಹಿಳೆ ಶವ ಪತ್ತೆ
ಮೈಸೂರು,ಡಿ.22: ನಗರದ ಕುಕ್ಕರಹಳ್ಳಿ ಕೆರೆಯಲ್ಲಿ ಸುಮಾರು 35 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.5.3 ಅಡಿ ಎತ್ತರ, ಗೋಧಿ ಬಣ್ಣ, ಸಾಧಾರಣ ಮೈಕಟ್ಟುವುಳ್ಳವರಾಗಿದ್ದು, ಎಡ ಮೊಣ ಕೈ ಮೇಲೆ ಹಳೆ ಗಾಯದ ಗುರುತುಗಳಿವೆ. ಪಿಂಕ್ ಮತ್ತು ಬಿಳಿ ಬಣ್ಣದ ಟಾಪ್ ಮತ್ತು ಬಿಳಿ ಬಣ್ಣದ ಪ್ಯಾಂಟ್ ಧರಿಸಿದ್ದಾರೆ.
ಶವವನ್ನು ಕೆ.ಆರ್.ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಈ ಬಗ್ಗೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರ ವಾರಸುದಾರರು ಇದ್ದಲ್ಲಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ಕಂಟ್ರೋಲ್ ರೂಂ ಸಂಪರ್ಕಿಸಬಹುದು.
Next Story





