ಮಹಿಳೆಯ ಚಿನ್ನ ಕಸಿದು ಪರಾರಿ

ಮೈಸೂರು,ಡಿ.22: ಮೈಸೂರಿನಲ್ಲಿ ಮತ್ತೆ ಸರಗಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದಾರೆ. ಹಾಡುಹಗಲೇ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ಸಿದ್ದಾರ್ಥ ನಗರ ಬಡಾವಣೆಯಲ್ಲಿ ನಡೆದಿದೆ.
ಕೆ.ಎಸ್.ಆರ್.ಪಿ. ಕಾನ್ಸ್ ಟೇಬಲ್ ಪತ್ನಿ ಭುವನೇಶ್ವರಿ ಎಂಬವರೇ 25 ಗ್ರಾಂ ಚಿನ್ನದ ಸರ ಕಳೆದುಕೊಂಡವರಾಗಿದ್ದಾರೆ. ಸಿದ್ದಾರ್ಥ ನಗರ ಬಡಾವಣೆಯ ಅಹಿಂಸಾ ಮಾರ್ಗದಲ್ಲಿ ಘಟನೆ ನಡೆದಿದ್ದು, ಭುವನೇಶ್ವರಿ ಅವರು ಅಂಗಡಿಯಿಂದ ಸಾಮಾನು ತರಲು ಹೋಗುತ್ತಿದ್ದ ಸಮಯದಲ್ಲಿ ಸ್ಕೂಟರ್‍ನಲ್ಲಿ ಬಂದ ಇಬ್ಬರು ಆಕೆಯ ಕತ್ತಿನಲ್ಲಿ ಹಾಕಲಾಗಿದ್ದ ಸರವನ್ನು ಕ್ಷಣಾರ್ಧದಲ್ಲಿ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ಸಂಬಂಧ ನಜರಬಾದ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಮನೆಗಳ್ಳತನ, ಸರಗಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಹೆಚ್ಚಿನ ನಿಗಾವಹಿಸಬೇಕೆಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
Next Story





