ಕುಂಟಿಕಾನದಲ್ಲಿ ಕಾರು ಪಲ್ಟಿ: ನಾಲ್ಕು ಮಂದಿಗೆ ಗಾಯ

ಮಂಗಳೂರು, ಡಿ. 22: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕುಂಟಿಕಾನದಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಇಂದು ರಾತ್ರಿ 11:30ರ ಸುಮಾರಿಗೆ ನಡೆದಿದೆ.
ಪತ್ರಕರ್ತರಿಗೆ ಸಂಬಂಧಿಸಿದ ಕಾರು ಎಂದು ಹೇಳಲಾಗಿದ್ದು, ಮಂಗಳೂರಿನಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಸಂದರ್ಭ ಅನಾಹುತ ಸಂಭವಿಸಿದೆ.
ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
Next Story





